ವಲಯ ಮಟ್ಟದ ಕ್ರೀಡಾಕೂಟ; ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ವಲಯ ಮಟ್ಟದ ಕ್ರೀಡಾಕೂಟ; ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
0Shares

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲುವಿನಲ್ಲಿ ನಡೆದ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಗೈದಿದ್ದಾರೆ.

8ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಖ್ಯಾತ್‌ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರಎಸೆತ (ಡಿಸ್ಕಸ್ ಥ್ರೋ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಹಾಗೇ ಅಂಕಿತ್‌ 100 ಮೀಟರ್‌ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 200 ಮೀಟರ್‌ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಲಿಯೋನ್‌ ಡಿ.ಎಸ್‌ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಅಪೂರ್ವ ಪ್ರತಿಭೆ ಪ್ರದರ್ಶಿಸಿ ವಿಜೇತರಾದ ಪ್ರಖ್ಯಾತ್‌ ಹಾಗೂ ಅಂಕಿತ್‌ ಅವರು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್‌ ಕುಮಾರ್‌ ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ .ಎನ್, ಚಂದ್ರಶೇಖರ, ಸಾನಿಕಾ‌ ಹಾಗೂ ಕಾವ್ಯಾ ಅವರು ಮಾರ್ಗದರ್ಶನ‌ ನೀಡಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now