ಸಂಗೀತ ನಿರ್ದೇಶಕ ಗುರುಕಿರಣ್ ತಾಯಿ ರತ್ನಕಾಂತಿ ಶೆಟ್ಟಿ ನಿಧನ

ಸಂಗೀತ ನಿರ್ದೇಶಕ ಗುರುಕಿರಣ್ ತಾಯಿ ರತ್ನಕಾಂತಿ ಶೆಟ್ಟಿ ನಿಧನ
0Shares

ಮಂಗಳೂರು: ಸಮಾಜ ಸೇವಕಿ. ಶಿಕ್ಷಣ ತಜ್ಞೆ ಎ.ರತ್ನಕಾಂತಿ ಶೆಟ್ಟಿ (93) ಅವರು ನಗರದ ಕದ್ರಿಯ ಮನೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಅವರಿಗೆ ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್‌ ಸೇರಿದಂತೆ ನಾಲ್ವರು ಪುತ್ರರು (ದೇವಿಚರಣ್ ಶೆಟ್ಟಿ, ಡಾ.ಶಿವಶರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ) ಇದ್ದಾರೆ.

ನಗರದ ಹಂಪನಕಟ್ಟೆಯ ಸರ್ಕಾರಿ ಪದವಿ ಕಾಲೇಜಿನಲ್ಲಿ (ಈಗಿನ ವಿಶ್ವವಿದ್ಯಾನಿಲಯ ಕಾಲೇಜು) ಪ್ರಾಧ್ಯಾಪಕಿಯಾಗಿ, ಬಳಿಕ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕಿಯಾಗಿ, ಪ್ರಾದೇಶಿಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದರು. ಪ್ರೇಮಕಾಂತಿ ಶಿಕ್ಷಣ ಮತ್ತು ಚಾರಿಟಬಲ್‌ ಟ್ರಸ್ಟ್‌ ಸ್ಥಾಪಿಸಿ, ಅದರ ಅಧ್ಯಕ್ಷೆಯಾಗಿದ್ದರು. ಶ್ರೀರಾಮಕೃಷ್ಣ ಕೋಆಪರೇಟಿವ್ ಸೊಸೈಟಿಯ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು. ಶ್ರೀದೇವಿ ಎಜುಕೇಷನ್ ಟ್ರಸ್ಟ್ ಮತ್ತು ಕಾಲೇಜುಗಳ ಸಂಸ್ಥಾಪಕ ನಿರ್ದೇಶಕರಾಗಿದ್ದರು.

ಅವರಿಗೆ ‘ಭಾರತ್ ಜ್ಯೋತಿ ಪ್ರಶಸ್ತಿ’, ‘ರಾಷ್ಟ್ರೀಯ ನಿರ್ಮಾಣ್ ರತನ್ ಪ್ರಶಸ್ತಿ’, ‘ಲೈಫ್‌ಟೈಮ್ ಎಕ್ಸಲೆನ್ಸ್ ಪ್ರಶಸ್ತಿ’, ‘ಎಜುಕೇಷನಲ್ ಎಕ್ಸಲೆನ್ಸ್ ಪ್ರಶಸ್ತಿ’ ಮತ್ತು ‘ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ’ಗಳು ಸಂದಿದ್ದವು. ಕಾಲೇಜು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಾಗಿ ಎಫ್‌ಐಬಿಆರ್‌ ಫೆಲೋಷಿಪ್ ಪಡೆದಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now