
ಪಾಣೆಮಂಗಳೂರು: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಅಬ್ದುಲ್ ಕರೀಂ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅಬ್ದುಲ್ ಕರೀಂ ಅವರು ಯುವ ಉದ್ಯಮಿಯಾಗಿ ಗುರುತಿಸಿಕೊಂಡಿದ್ದು, ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಡವರ, ನಿರ್ಗತಿಕರ ಏಳಿಗೆಗಾಗಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಹಾಗೂ ಕಷ್ಟದಲ್ಲಿರುವ ಕುಟುಂಬಗಳಿಗೆ ಸದಾ ನೆರವಾಗುತ್ತಾ ಬಂದಿದ್ದಾರೆ. ಅವರ ಸಮಾಜ ಸೇವೆ ಹಾಗೂ ಪಕ್ಷದ ಬದ್ಧತೆಯನ್ನು ಗುರುತಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ.
ಅವರ ನೇಮಕಕ್ಕೆ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now