
ಮಂಗಳೂರು : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದ ಕುಕ್ಕುಂದೂರು ನಿವಾಸಿ ಪಾರ್ಥ ಅಲಿಯಾಸ್ ಪಾರ್ಥಸಾರಥಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ Cr No. 231/2017ಕಲಂ 324, 326 504 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದ. ಆರೋಪಿಯ ವಿರುದ್ಧ ಮಾನ್ಯ ನ್ಯಾಯಾಲಯವು ಎಲ್‌ಪಿಸಿ ವಾರೆಂಟ್ ಹೊರಡಿಸಿತ್ತು.
ಆರೋಪಿ ಪಾರ್ಥ ಸುಮಾರು 9 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಎಎಸ್‌ಐ ಗಣೇಶ್, ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ್ ಹಾಗೀ ಪೊಲೀಸ್ ಕಾನ್ಸ್‌ಟೇಬಲ್ ಮಲ್ಲಿಕ್ ಜಾನ್ ರವರು ಕದ್ರಿ ಮೈದಾನ ಬಳಿ ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now