ಮಂಗಳೂರು ದಸರಾ 2026 : ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು ದಸರಾ 2026 : ಆಮಂತ್ರಣ ಪತ್ರಿಕೆ ಬಿಡುಗಡೆ
0Shares

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ. 11 ರಿಂದ 21 ವರೆಗೆ ಜರುಗಲಿರುವ ಮಂಗಳೂರು ದಸರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಇಂದು(ಸೆ.24 )ಶ್ರೀಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಖಜಾಂಚಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿ ಕಿಶೋರ್ ದಂಡೇಕೇರಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ. ಸುವರ್ಣ, ಸದಸ್ಯರಾದ ರಾಧಾಕೃಷ್ಣ ಉರ್ವ, ಪಿ.ಕೆ. ಗೌರವಿ ರಾಜಶೇಖರ್, ಸುವರ್ಣತೀಶ್.

ಉದ್ಯಮಿ ಪ್ರವೀಣ್ ಕುಮಾರ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಕೋಶಾಧಿಕಾರಿ ಯೋಗೀಶ್ ಕೋಟ್ಯಾನ್, ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಟ್ರಸ್ಟಿ ರಾಜೇಂದ್ರ ಚಿಲಿಂಬಿ, ರವಿರಾಜ್, ಸುಭಾಷ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now