ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ‘ನವ’ ವಿನೂತನ ಕಾರ್ಯಕ್ರಮ…!!

ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ‘ನವ’ ವಿನೂತನ ಕಾರ್ಯಕ್ರಮ…!!

0Shares

ಮಂಗಳೂರು: ಯುವ ಜನರು ಸೇರಿದಂತೆ ಸಮಾನ

ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ ಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಯುವಕರೆಲ್ಲ ಸೇರಿಕೊಂಡು ಆರಂಭಿಸಿದ್ದ ಮಂಗಳೂರು ಕಂಬಳಕ್ಕೆ ಈ ಬಾರಿ 9ನೇ ವರ್ಷದ ಸಂಭ್ರಮವಾಗಿರುವುದು ಅತ್ಯಂತ ಖುಷಿಯ ವಿಚಾರ. ಈ ನಿಟ್ಟಿನಲ್ಲಿ ಒಂಬತ್ತು ರೀತಿಯ ವಿಭಿನ್ನ ಕಾರ್ಯಕ್ರಮ ಆಯೋಜಿಸುವ ಯೋಚನೆ ಇಟ್ಟುಕೊಂಡಿದ್ದೇವೆ ಎಂದು ಕ್ಯಾ. ಚೌಟ ತಿಳಿಸಿದ್ದಾರೆ

ಕರಾವಳಿಯ ಜನಪದ ಕ್ರೀಡೆಯಾದ ಕಂಬಳ ನಿಷೇಧವಾಗುತ್ತದೆ ಎಂದಾಗ ಅದರ ವಿರುದ್ಧ ಮಂಗಳೂರಿನಲ್ಲಿ ಪಕ್ಷ-ಬೇಧವಿಲ್ಲದೆ ದೊಡ್ಡ ಪ್ರತಿಭಟನೆ ನಡೆಸಲಾಗಿತ್ತು. ಮಂಗಳೂರು ನಗರದಲ್ಲಿ ಕಂಬಳ ಆರಂಭಗೊಳ್ಳಲು ಆ ದಿನವೇ ನಿರ್ಧರಿಸಲಾಗಿತ್ತು. ಅದೇ ಹುಮ್ಮಸ್ಸಿನಲ್ಲಿ ಗೋಲ್ಡ್ ಫಿಂಚ್ ಸಮೂಹ ಸಂಸ್ಥೆಯ ಮಾಲೀಕ ಪ್ರಕಾಶ್‌ ಶೆಟ್ಟಿ ಸಹಕಾರದಲ್ಲಿ ಮಂಗಳೂರು ಕಂಬಳ ಆರಂಭಿಸಿ, ಸತತ 8 ವರ್ಷಗಳಿಂದ ಅದನ್ನು ಬಹಳ ವಿಭಿನ್ನ ರೀತಿಯಲ್ಲಿ ನಡೆಸುತ್ತಾ ಬರಲಾಗಿದೆ. ಮಂಗಳೂರು ಕಂಬಳ ಇಷ್ಟೊಂದು ಯಶಸ್ವಿಯಾಗಿ ಹಾಗೂ ಅಚ್ಚು-ಕಟ್ಟಾಗಿ ನಡೆಯುತ್ತಿರುವುದಕ್ಕೆ ನಮ್ಮ ಯುವಕರ ತಂಡದ ಹುಮ್ಮಸ್ಸು ಪ್ರಮುಖ ಕಾರಣವಾಗಿದೆ. ಈ ಬಾರಿ 9ನೇ ವರ್ಷ ಆಗಿರುವುದರಿಂದ ಒಂಬತ್ತು ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದರಲ್ಲಿ ಮರೆಯಾಗುತ್ತಿರುವ ಜನಪದ ಕ್ರೀಡೆ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವುದು ಸೇರಿದಂತೆ ದೇಶ-ವಿದೇಶಗಳಿಗೆ ತೆರಳಿ ಉದ್ಯಮ ಕಟ್ಟಿದ ನಮ್ಮ ಊರಿನ ಸಾಧಕರನ್ನು ಈ ಕಂಬಳಕ್ಕೆ ಕರೆಸಿ

ಸನ್ಮಾನಿಸುವ ಚಿಂತನೆ ಕೂಡ ಸೇರಿವೆ. ಶೀಘ್ರದಲ್ಲೇ ಈ ಎಲ್ಲ 9 ಕಾರ್ಯಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಕ್ಯಾ. ಚೌಟ ಹೇಳಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ನಾಗರಾಜ ಶೆಟ್ಟಿ ಮಾತನಾಡಿ, ಸಂಸದರಾಗಿ ಹಾಗೂ ಕಂಬಳದ ರುವಾರಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡ ಅಭಿವೃದ್ಧಿ ಜತೆಗೆ ತುಳುನಾಡಿನ ನಮ್ಮ ಜನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿರುವುದು ಶ್ಲಾಘನೀಯ. ಪ್ರಧಾನಿ ಮೋದಿ ಸೇರಿದಂತೆ ದೆಹಲಿಯಲ್ಲಿರುವ ಹಲವು ಗಣ್ಯರಿಗೆ ಕ್ಯಾ. ಚೌಟ ಅವರು ನಮ್ಮ ಕಂಬಳದ ಬಗೆಗಿನ ಸ್ಮರಣಿಕೆಯನ್ನು ನೀಡುವ ಮೂಲಕ ಈ ಜಾನಪದ ಕ್ರೀಡೆಯ ಅರಿವನ್ನು ರಾಷ್ಟ್ರರಾಜಧಾನಿಯಲ್ಲಿಯೂ ಮೂಡಿಸುತ್ತಿದ್ದಾರೆ. ಮುಂದೆ ಇದು ವಿಶ್ವಮಟ್ಟದಲ್ಲಿಯೂ ಹರಡುವ ಕೆಲಸವು ಕ್ಯಾ. ಚೌಟ ಅವರಿಂದ ಆಗಲಿ ಎಂದು ಅವರು ಹಾರೈಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now