
ಮಂಗಳೂರು: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ 23 ವರ್ಷದ ಲ್ಯಾಬ್ ಟೆಕ್ನಿಷಿಯನ್ ಯುವತಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವತಿಯನ್ನು ಕಂಕನಾಡಿ ನಿವಾಸಿ ಸ್ನೇಹ (23) ಎಂದು ಗುರುತಿಸಲಾಗಿದೆ. ಅವರು ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನವರಾಗಿದ್ದು, ಪ್ರಸ್ತುತ ಕಂಕನಾಡಿಯಲ್ಲಿ ತಂದೆ-ತಾಯಿಯೊಂದಿಗೆ ವಾಸವಾಗಿದ್ದರು.
ಜುಲೈ 1ರಂದು ಬೆಳಿಗ್ಗೆ ಕಂಕನಾಡಿಯ ಮನೆಯಿಂದ ಉರ್ವ ಅಶೋಕನಗರದಲ್ಲಿರುವ ಕೆಲಸದ ಸ್ಥಳಕ್ಕೆ ತೆರಳಿದ್ದ ಸ್ನೇಹ, ಬಳಿಕ ಮನೆಗೆ ಮರಳಿಲ್ಲ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now