ಸಮುದಾಯ ವೈದ್ಯಕೀಯ ವಿಭಾಗ ಕೆ ಎಮ್ ಸಿ ಮಣಿಪಾಲ, ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ ಪರ್ಕಳ, ಇವರ ಸಂಯುಕ್ತ ಆಶ್ರಯದಲ್ಲಿ ಬಂಟಕಲ್ಲು ಶಾಖೆಯ ವಿಂಶತಿ ವರ್ಷದ ಪ್ರಯುಕ್ತ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಂಟಕಲ್ಲು ಇಲ್ಲಿ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸ್ಕೂಲ್ ಬ್ಯಾಗ್ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಹಾಗೂ ಕ್ಯಾನ್ಸರ್ ಕುರಿತು ಮಾಹಿತಿ ಕ್ಯಾನ್ಸರ್ ತಪಾಸಣೆ ಮತ್ತು ಆರೋಗ್ಯ ವೈದ್ಯಕೀಯ ಶಿಬಿರವನ್ನು ಹಮ್ಮಿಕೊಡಿದ್ದರು.
ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾದ್ಯಾಪಕಿ ಡಾ.ಅಖಿಲಾ ಆರೋಗ್ಯಕರ ಜೀವನ ಕ್ರಮದ ಬಗ್ಗೆ ಉಪನ್ಯಾಸ ನೀಡಿದರು ಆರೋಗ್ಯ ಶಿಬಿರದಲ್ಲಿ ಹೆಚ್ಚಿ ನ ಚಿಕಿತ್ಸೆಗೆ ಮಣಿಪಾಲಕ್ಕೆ ಆಗಮಿಸಿದ ಶಿಬಿರಾರ್ಥಿಗಳು ಯಾವ ಹಂತದಲ್ಲಿ ಸರಳವಾಗಿ ವೈದ್ಯರನ್ನು ಸಂಪರ್ಕಿಸಬೇಕು ಎಂಬುದನ್ನು ಸಮುದಾಯ ವೈದ್ಯಕೀಯ ವಿಭಾಗದ ಕು.ಪುಷ್ಪಾ ಅವರು ಸವಿವರವಾಗಿ ತಿಳಿಸಿದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now