ಉಡುಪಿ, ಮಣಿಪಾಲದಲ್ಲಿ ಪೊಲೀಸರಿಂದ ಬೆಳ್ಳಂಬೆಳಗ್ಗೆ ಶಾಲಾ ಬಸ್‌ಗಳ ದಿಢೀ‌ರ್ ತಪಾಸಣೆ

ಉಡುಪಿ, ಮಣಿಪಾಲದಲ್ಲಿ ಪೊಲೀಸರಿಂದ ಬೆಳ್ಳಂಬೆಳಗ್ಗೆ ಶಾಲಾ ಬಸ್‌ಗಳ ದಿಢೀ‌ರ್ ತಪಾಸಣೆ
0Shares

ಇತ್ತೀಚೆಗೆ ಮಣಿಪಾಲದಲ್ಲಿ ಖಾಸಗಿ ಶಾಲೆಯ ಬಸ್‌ ಅಪಘಾತಕ್ಕೀಡಾಗಿದ್ದು, ಬಸ್‌ನ ಕಂಡಕ್ಟರ್ ಚಾಲನಾ ಪರವಾನಗಿ ಇಲ್ಲದೇ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಪ್ರಮುಖ ಕಾರಣ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಪೊಲೀಸರು ಶಾಲಾ ವಾಹನಗಳ ಮೇಲೆ ವಿಶೇಷ ನಿಗಾ ವಹಿಸಿ ವ್ಯಾಪಕ ತಪಾಸಣೆ ನಡೆಸುತ್ತಿದ್ದಾರೆ.

ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಶಾಲಾ ವಾಹನಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದು, ಶಾಲಾ ಆಡಳಿತ ಮಂಡಳಿಗಳು ಹಾಗೂ ವಾಹನ ಮಾಲೀಕರು ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now