ಎಂ. ಜಿ. ಎಂ. ಕಾಲೇಜು: ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ

ಎಂ. ಜಿ. ಎಂ. ಕಾಲೇಜು: ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ
0Shares

ಜಗತ್ತಿನಲ್ಲಿ ಯಾವುದೇ ಕಲೆ ಜನರ ಮನಸ್ಸನ್ನು ಅರಳಿಸಿ‌ ಸಂಸ್ಕಾರವಂತರನ್ನಾಗಿ ಮಾಡುತ್ತದೆ. ಉಡುಪಿ ಪರಿಸರ ಹಾಗೂ ಕೃಷ್ಣದೇವರ ಸಾನಿಧ್ಯ ಕಲಾರಾಧನೆಗೆ ಹೆಸರಾಗಿದೆ. ಉಡುಪಿ ಯಕ್ಷಗಾನ ಕೇಂದ್ರ ಕಳೆದ ಐದು ದಶಕಗಳಿಂದ ನಿರಂತರ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಅಂತೆಯೇ ಎಂ. ಜಿ. ಎಂ. ಕಾಲೇಜು ಆವರಣ ಕಲೆ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿ ರಾಜ್ಯ ರಾಷ್ಟ್ರದ ಗಮನ ಸೆಳೆದಿದೆ. ಅಂತಹ ಸಂಸ್ಥೆಯಲ್ಲಿ ಯಕ್ಷಗಾನ ಕಲೆಗೆ ಅಕಾಡೆಮಿಕ್ ಸ್ವರೂಪ ನೀಡಿ ತರಬೇತಿ ನೀಡುತ್ತಿರುವುದು ಶ್ಲಾಘನೀಯ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಯಲ್ಲಿ ಈ ಯೋಜನೆಯ ಸದುಪಯೋಗ ಪಡೆದು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಎಂ. ಜಿ. ಎಂ. ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಪೈ ಹೇಳಿದರು.

ಅವರು ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ ಹಾಗೂ ಎಂ. ಜಿ. ಎಂ. ಕಾಲೇಜಿನ ಯಕ್ಷಗಾನ ಮತ್ತು ನಾಟಕ ರಂಗ ಮತ್ತು ಐಕ್ಯೂಎಸಿ ಸಂಯುಕ್ತವಾಗಿ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಿದ ಪ್ರಸಕ್ತ ಶೈಕ್ಷಣಿಕ ಸಾಲಿನ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ ಇದರ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ ಯಕ್ಷ ಗುರು ಕೃಷ್ಣಮೂರ್ತಿ ಭಟ್ ಬಗ್ವಾಡಿ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಪ್ರೊ. ಶೈಲಜಾ ಉಪಸ್ಥಿತರಿದ್ದರು. ಯಕ್ಷಗಾನ ಮತ್ತು ನಾಟಕ ರಂಗದ ಸಂಯೋಜಕ ರಾಘವೇಂದ್ರ ತುಂಗ ಕೆ. ಸ್ವಾಗತಿಸಿ ನಿರೂಪಿಸಿದರು. ಸಹಸಂಯೋಜಕ ಶ್ರೀಧರ ರಾವ್ ಸಹಕರಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now