
ಮೂಡುಬೆಳ್ಳೆ: ಕಾರ್ಕಳ–ಮೂಡುಬೆಳ್ಳೆ–ಉಡುಪಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮೃತರನ್ನು ಶಿರ್ವ ಸಮೀಪದ ಕಡಂಬು ನಿವಾಸಿ ಸುಕೇಶ್ ಆಚಾರ್ಯ (24) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಕೇಶ್ ಅವರನ್ನು ಸ್ಥಳೀಯರು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿದ್ದರು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುಕೇಶ್ ಅವರು ಶಿರ್ವದ ಆಟೋ ಎಲೆಕ್ಟ್ರಿಕಲ್ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಗ್ಯಾರೇಜ್ನಲ್ಲಿ ಅಂಗಡಿ ಹಾಗೂ ವಾಹನ ಪೂಜೆ ನೆರವೇರಿಸಿ ಮನೆಗೆ ತೆರಳಿದ್ದರು. ಬಳಿಕ ವಾಹನ ದುರಸ್ತಿಗೆ ಸಂಬಂಧಿಸಿದ ಕರೆ ಬಂದ ಹಿನ್ನೆಲೆಯಲ್ಲಿ ಮೂಡುಬೆಳ್ಳೆಯ ನಾಲ್ಕು ಬೀದಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮೃತ ಯುವಕ ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಯುವಕನ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಶೋಕ ಆವರಿಸಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now