
ಮೂಡುಬಿದಿರೆ: ಖಾಸಗಿ ಬಸ್ನ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಚರಂಡಿಯಲ್ಲಿ ಚಕ್ರಗಳು ಸಿಲುಕಿಕೊಂಡ ಘಟನೆ ಸೋಮವಾರ ಮೂಡುಬಿದಿರೆಯ ಗಾಂಧಿನಗರದ ಬಳಿ ನಡೆದಿದೆ.
ಮೂಲ್ಕಿಯಿಂದ ಮೂಡುಬಿದಿರೆ ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಗಾಂಧಿನಗರದ ಮೂಲಕ ಹಾದುಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬ್ರೇಕ್ ಫೇಲ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ತಿರುಗಿದ್ದು, ಅದರ ಚಕ್ರಗಳು ಚರಂಡಿಯಲ್ಲಿ ಸಿಲುಕಿಕೊಂಡಿವೆ.
ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಬಸ್ ಚರಂಡಿಯಲ್ಲಿ ಸಿಲುಕಿಕೊಂಡಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ..!!
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now