ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದಿಶಾಗೆ 600 ಅಂಕ

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದಿಶಾಗೆ 600 ಅಂಕ

0Shares

ಮೂಡುಬಿದಿರೆ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಗುರುವಾರ (ಏ.09) ಮಧ್ಯಾಹ್ನ ಪ್ರಕಟಗೊಂಡಿದ್ದು, ಮೂಡುಬಿದಿರೆ ಆಳ್ವಾಸ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಸಾಧನೆ ಮಾಡಿದ್ದಾರೆ.

ಮೂಡುಬಿದಿರೆ ಮೂಲದ ದಿಶಾ ವಾಣಿಜ್ಯ ವಿಭಾಗದಲ್ಲಿ ಒಟ್ಟು 600 ಅಂಕಗಳಿಗೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now