ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ

ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ

0Shares

ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿದೆ.

ಕಾರ್ಯಕ್ರಮದ ವರ್ಣರಂಜಿತ ಕರಪತ್ರವನ್ನು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟಾನಿ ಆಲ್ವಾರೀಸ್ ರವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು.ಸೆಪ್ಟೆಂಬರ್ 11ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಹಲವರು ಸಭೆಯಲ್ಲಿ ಮಾತನಾಡುವ ಮೂಲಕ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಕೆಥೋಲಿಕ್ ಸಭಾದ ಅಧ್ಯಕ್ಷರಾದ ಸಂತೋಷ್ ಡಿಸೋಜ ಬಜಪೆ,ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನಾಯಕರಾದ ಲಕ್ಷ್ಮಣ್, ಯೆನಪೋಯ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಜೀವನ್ ರಾಜ್ ಕುತ್ತಾರ್,ಸಂತ ಅಲೋಶಿಯಸ್ ಕಾಲೇಜ್ ನ ಪ್ರಾಧ್ಯಾಪಕರಾದ ಫ್ಲೋರಾ ಕ್ಯಾಸ್ಟಲಿನೋ, ಸಾಮರಸ್ಯ ಮಂಗಳೂರು ಅಧ್ಯಕ್ಷರಾದ ಮಂಜುಳಾ ನಾಯಕ್,ಮಹಿಳಾ ಮುಖಂಡರಾದ ಸುಮತಿ ಎಸ್ ಹೆಗ್ಡೆ, ವೇದಿಕೆಯ ಪ್ರಮುಖರಾದ ಡೋಲ್ಫಿ ಡಿಸೋಜರವರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now