
ಮುಂಬಯಿ:: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ,ಕನ್ನಡ ಸಾಹಿತ್ಯ ಪರಿಷತ್,ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ ,ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಅಧ್ಯಕ್ಷ ರಾಗಿ ನಿರಂತರವಾಗಿ ಕನ್ನಡಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತಸಾಹಿತಿ ಜಯಾನಂದ ಪೆರಾಜೆಯವರನ್ನು 2026ನೇ ಸಾಲಿನ ಸಾಲಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟರಮಣ ಹೊಳ್ಳ ಮತ್ತು ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ.ವಾಮನ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೆರಾಜೆ ಅವರು ಕನ್ನಡ ಭಾಷಾ ಶಿಕ್ಷಕರಾಗಿ,ಉಪನ್ಯಾಸಕರಾಗಿ ಕಳೆದ 40 ವರ್ಷಗಳಿಂದ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತರಾಗಿದ್ದು ಲೇಖನಗಳ ಮೂಲಕ ಪರಿಚಿತರಾಗಿದ್ದಾರೆ. ರಾಷ್ಟ್ರ ಮಟ್ಟದ ಹಲವು ಕವಿಗೋಷ್ಠಿಯಲ್ಲಿ ಭಾಗವಹಿಸಿ ಚುಟುಕು ಕವನ ಸಂಕಲನಗಳನ್ನು ಹೊರತಂದಿದ್ದಾರೆ. ಬಹುಮುಖ ವ್ಯಕ್ತಿತ್ವದ ಪ್ರತಿಭಾವಂತ,ಕಲಾವಿದ, ನಿರ್ದೇಶಕರಾಗಿ, ಕ್ರೀಯಾಶೀಲ ತರಬೇತುದಾರರಾಗಿ,ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಜೇಸಿ,ಎಸ್.ಸಿ.ಐ. ಲಯನ್ಸ್ ಕ್ಲಬ್ ಹಾಗೂ ಹಲವು ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರ, ಸಾಮಾಜಿಕ ಕಾರ್ಯದಲ್ಲಿ ಅವಿರತ ತೊಡಗಿಸಿಕೊಂಡಿರುವ ಪೆರಾಜೆಯವರ ಬಹುಮುಖಿ ಸೇವೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಆಯ್ಕೆ ಸಮಿತಿ ಪ್ರಕಟಣೆ ತಿಳಿಸಿದೆ.
ಜು.26ರಂದು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now