
ಮುಂಬಯಿ, ಜು.30: ಕರ್ನಾಟಕ ರಾಜ್ಯದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೇವೆಯ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಕಳೆದ ಮಾರ್ಚ್. 31ರ ಕ್ಯಾಲೇಂಡರ್ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕ್‍ನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ ಮಂಡಳಿ ವಹಿಸಿಕೊಂಡ ನಂತರ ಇಡೀ ಕರ್ನಾಟಕ ರಾಜ್ಯದ್ಯಂತ ವಿಸ್ತರಿಸಿದೆ. ಎಮ್.ಸಿ.ಸಿ ಬ್ಯಾಂಕ್ ಸಂಪೂರ್ಣವಾಗಿ ಕೋರ್ ಬ್ಯಾಂಕ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇತರ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ ಲಭ್ಯವಿರುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಮ್.ಸಿ.ಸಿ. ಬ್ಯಾಂಕ್‍ನಲ್ಲಿ ದೊರೆಯುತ್ತಿವೆ. ಬ್ಯಾಂಕ್ ಕರ್ನಾಟಕ ರಾಜ್ಯದಾದ್ಯಂತ ತನ್ನ ಶಾಖೆಗಳನ್ನು ವಿಸ್ತರಿಸುವ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದೆ. ಇದೇ ಆ.03ರ ಆದಿತ್ಯವಾರ ಉಡುಪಿ ಜಿಲ್ಲೆಯ ಬೈಂದೂರುನಲ್ಲಿ ತನ್ನ 20ನೇ ಶಾಖೆಯನ್ನು ಹಾಗೂ 21ನೇ ಶಾಖೆಯನ್ನು ಅಕ್ಟೋಬರ್ 05ರಂದು ಸಂತೆಕಟ್ಟೆಯಲ್ಲಿ ತೆರೆಯಲಿದೆ ಎಂದು ಎಮ್.ಸಿ.ಸಿ ಬ್ಯಾಂಕ್ ಕಾರ್ಯಾಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ತಿಳಿಸಿದರು.

ಇಂದಿಲ್ಲಿ ಬುಧವಾರ ಮಂಗಳೂರುನಲ್ಲಿನ ಬ್ಯಾಂಕ್‍ನ ಪ್ರಧಾನ ಕಛೇರಿಯ ಸಮಾಲೋಚನಾ ಸಭಾಗೃಹದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅನಿಲ್ ಲೋಬೊ ಕರ್ನಾಟಕ ರಾಜ್ಯದ್ಯಾಂತ ಕಾರ್ಯವ್ಯಾಪ್ತಿ ಹೊಂದಿರುವ ಎಮ್.ಸಿ.ಸಿ ಬ್ಯಾಂಕ್, ಮಂಗಳೂರುನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಛೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದೆ.
ತನ್ನ ಸಾರಥ್ಯದ ಆಡಳಿತ ಮಂಡಳಿಯು 2018ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, 2018ರಿಂದ 2025ರ ವಿತ್ತೀಯ ವರ್ಷದಲ್ಲಿ ಅಭೂತಪೂರ್ವ ಪ್ರಗತಿಯನ್ನು ದಾಖಲಿಸಿದೆ. ರೂ. 304 ಕೋಟಿ ಇದ್ದ ಬ್ಯಾಂಕಿನ ಠೇವಣಿಯು 2025ರಲ್ಲಿ ರೂ.728 ಕೋಟಿ ತಲುಪಿದ್ದು, ಶೇಕಡಾ 139ರಷ್ಟು ಪ್ರಗತಿಯನ್ನು ದಾಖಲಿಸಿದೆ. ರೂ.191 ಕೋಟಿ ಇದ್ದ ಸಾಲ ಮತ್ತು ಮುಂಗಡಗಳು ರೂ.572 ಕೋಟಿಗೆ ತಲುಪಿದ್ದು, ಶೇಕಡಾ 199ರಷ್ಟು ಪ್ರಗತಿಯನ್ನು ದಾಖಲಿಸಿದೆ. ರೂ.13 ಕೋಟಿ ಇದ್ದ ಪಾಲು ಬಂಡವಾಳ ರೂ.33 ಕೋಟಿಗೆ ತಲುಪಿದ್ದು, ಶೇಕಡಾ 154ರಷ್ಟು ಪ್ರಗತಿಯನ್ನು ದಾಖಲಿಸಿದೆ. ಬ್ಯಾಂಕ್‍ನ ರಿಸರ್ವ್ ರೂ.29 ಕೋಟಿಯಿಂದ ರೂ.79 ಕೋಟಿಗೆ ತಲುಪಿದ್ದು, ಶೇಕಡಾ 172ರಷ್ಟು ಪ್ರಗತಿಯನ್ನು ದಾಖಲಿಸಿದೆ. ರೂ.496 ಕೋಟಿ ಇದ್ದ ವ್ಯವಹಾರ ರೂ.1300 ಕೋಟಿಗೆ ತಲುಪಿದ್ದು, ಶೇಕಡಾ 162ರಷ್ಟು ಪ್ರಗತಿಯನ್ನು ದಾಖಲಿಸಿದೆ.11.70% ಇದ್ದ ಬ್ಯಾಂಕ್‍ನ ಸಿಆರ್‍ಎಆರ್ (ಕ್ಯಾಪಿಟಲ್ ಟು ರಿಸ್ಕ್ ಅಸೆಟ್ಸ್ ರೇಶಿಯೊ) ಪ್ರಮಾಣವು ಶೇಕಡಾ 19.82 ತಲುಪಿದ್ದು ಶೇಕಡಾ 62 ರಷ್ಟು ಪ್ರಗತಿಯನ್ನು ದಾಖಲಿಸಿದೆ. ಶೇಕಡಾ 0.56 ಇದ್ದ ಬ್ಯಾಂಕಿನ ರಿಟರ್ನ್ ಆನ್ ಅಸೆಟ್ಸ್ ಮೌಲ್ಯವು ಶೇಕಡಾ 1.40 ಗೆ ತಲುಪಿ ಶೇಕಡಾ 150 ಪ್ರಗತಿಯನ್ನು ದಾಖಲಿಸಿದೆ ಎಂದು ಅನಿಲ್ ಲೋಬೊ ತಿಳಿಸಿದರು.
ಬ್ಯಾಂಕ್‍ನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕ್‍ನ ಆಥಿರ್üಕ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕ್‍ನ (ಆರ್‍ಬಿಐ) ಎಲ್ಲಾ ಮಾನದಂಡಗಳನ್ನು ನಿರ್ವಾಹಿಸಿ ಎಮ್.ಸಿ.ಸಿ ಬ್ಯಾಂಕ್ 22 ವರ್ಷಗಳ ನಂತರ ಬ್ರಹ್ಮಾವರ, ಬೆಳ್ತಂಗಡಿ ಮತ್ತು ಬೆಳ್ಮಾಣ್ ಇಲ್ಲಿ ಮೂರು ಶಾಖೆಗಳನ್ನು ತೆರೆದಿದ್ದು, ಶಾಖೆಗಳ ಒಟ್ಟು ಸಂಖ್ಯೆಯು 16ರಿಂದ 19ಕ್ಕೆ ತಲುಪಿದೆ.

ಎಮ್.ಸಿ.ಸಿ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಅನಿಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಬೈಂದೂರು ಶಾಖೆಯ ಉದ್ಘಾಟಣಾ ಕಾರ್ಯಕ್ರಮ ನಡೆಯಲಿದ್ದು ಹೋಲಿ ಕ್ರಾಸ್ ಚರ್ಚ್ ಬೈಂದೂರು ಇದರ ಧರ್ಮಗುರು ವಂ| ವಿನ್ಸೆಂಟ್ ಕುವೆಲ್ಲೊ ಶಾಖೆಯನ್ನು ಆಶೀರ್ವದಿಸಲಿದ್ದಾರೆ. ಬೈಂದೂರುನ್ ಶಾಸಕ ಗುರುರಾಜ್ ಗಂಟಿಹೊಳೆ ಮುಖ್ಯ ಅತಿಥಿüಯಾಗಿ ಆಗಮಿಸಲಿದ್ದಾರೆ. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು ಇದರ ಆಡಳಿತ ಧರ್ಮದರ್ಶಿ ಬಾಬು ಶೆಟ್ಟಿ ಬೈಂದೂರು, ಸೈಂಟ್ ಥಾಮಸ್ ರೆಸಿಡೆನ್ಸಿಯಲ್ ಸ್ಕೂಲ್ ಇದರ ಪ್ರಾಂಶುಪಾಲ ವಂ| ಫಿಲಿಪ್ ನೆಲಿವಿಲ್ಲ, ಉಡುಪಿ ಜಿಲ್ಲಾ ಪಂಚಾಯತ್‍ನ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸದಾಶಿವ ಡಿ.ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಟಿನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಬೈಂದೂರು ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ ಗೌರವ ಅತಿಥಿüಗಳಾಗಲಿದ್ದಾರೆ.
ಅಲ್ಲದೆ, ಆ.08ರಂದು ಬೆಳ್ಳಣ್‍ನಲ್ಲಿ 9ನೇ ಎಟಿಎಂ, ಆ.10ರಂದು ಸುರತ್ಕಲ್‍ನಲ್ಲಿ 10ನೇ ಎಟಿಎಂ, ಆ.17ರಂದು ಕುಲಶೇಖರ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಿ ಉದ್ಘಾಟನೆ ಮತ್ತು 11ನೇ ಎಟಿಎಂ ಉದ್ಘಾಟನೆ ನಡೆಯಲಿದೆ. ಸೆ.14ರಂದು ಕಿನ್ನಿಗೋಳಿಯಲ್ಲಿ 12ನೇ ಎಟಿಎಂ, ಸೆ.27ರಂದು ಉಡುಪಿ ಶಾಖೆಯಲ್ಲಿ 13ನೇ ಎಟಿಎಂ ಮತ್ತು ಅ.05ರಂದು 14ನೇ ಸಂತೆಕಟ್ಟೆಯಲ್ಲಿ ಎಟಿಎಂ ಉದ್ಘಾಟನೆಗೊಳ್ಳಲಿದೆ ಎಂದೂ ಲೋಬೊ ವಿವರಿಸಿದರು.
ಪ್ರಸ್ತುತ ಬ್ಯಾಂಕ್‍ನಲ್ಲಿ ಗ್ರಾಹಕರಿಗೆ ಕಡಿಮೆ ಬಾಡಿಗೆ ದರದಲ್ಲಿ ಲಾಕರ್ ಸೌಲಭ್ಯ, ಸ್ಪರ್ಧಾತ್ಮಕ ಬಡ್ಡಿ ದರದಲ್ಲಿ ದೇಶ ವಿದೇಶ ವಿಧ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗ್ರಹ ಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲವನ್ನು ನೀಡುತ್ತಿದೆ. ಎಟಿಎಂ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ. ಬ್ಯಾಂಕ್‍ನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳಂತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಜಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾಪೆರ್Çರೇಶನ್‍ನಿಂದ (ಡಿಐಜಿಸಿ) ವಿಮಾ ಸೌಲಭ್ಯ ಬ್ಯಾಂಕ್ ಒದಗಿಸುತ್ತಿದೆ ಎಂದರು.

ಬ್ಯಾಂಕ್‍ನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿ’ಸಿಲ್ವಾ, ನಿರ್ದೇಶಕರುಗಳಾದ ಆಂಡ್ಯೂ ಡಿಸೋಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ ರೊಡ್ರಿಗಸ್, ಡೇವಿಡ್ ಡಿಸೋಜಾ, ಎಲ್ರಾಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ ಪಿಂಟೊ, ಸುಶಾಂತ್ ಸಲ್ದಾನ್ಹಾ, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜಾ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿ’ಕ್ರೂಜ್, ಶರ್ಮಿಳಾ ಮಿನೇಜಸ್ ಮತ್ತು ಮಹಾಪ್ರಬಂಧಕ ಸುನಿಲ್ ಮಿನೇಜಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now