
ನವದೆಹಲಿ: ಇಡೀ ದೇಶದ ಗಮನ ಸೆಳೆದಿದ್ದ ಉಜಿರೆ
ಸಮೀಪದ ಧರ್ಮಸ್ಥಳ ಗ್ರಾಮದ ಯುವತಿ ಸೌಜನ್ಯಳ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಸೋಮವಾರ ಆದೇಶಿಸಿದೆ.
ಕರ್ನಾಟಕ ಸರ್ಕಾರದಿಂದ ರಚನೆಗೊಳ್ಳುವ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಮರುತನಿಖೆಯಾಗಬೇಕು. ತನಿಖೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆಯೂ ಸೂಚಿಸಿದೆ. ಸೌಜನ್ಯಾಳ ತಾಯಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಈ ಆದೇಶ ನೀಡಲಾಗಿದೆ
ಬೆಳ್ತಂಗಡಿ: ಸರ್ವೋಚ್ಚ ನ್ಯಾಯಾಲಯವು ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದ್ದು ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಕಚೇರಿಯ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿವೆ. ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ. ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ಆಶಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now