20 ದಿನಗಳಿಂದ ಉಪವಾಸ ಸತ್ಯಾಗ್ರಹ: ಪೊಲೀಸರಿಂದ ಸೋನಂ ವಾಂಗ್ಟುಕ್ ಆಸ್ಪತ್ರೆಗೆ ದಾಖಲು

20 ದಿನಗಳಿಂದ ಉಪವಾಸ ಸತ್ಯಾಗ್ರಹ: ಪೊಲೀಸರಿಂದ ಸೋನಂ ವಾಂಗ್ಟುಕ್ ಆಸ್ಪತ್ರೆಗೆ ದಾಖಲು
0Shares

ನವದೆಹಲಿ: ಜೂನ್ 28ರಿಂದ ನವದೆಹಲಿಯ ಜಂತ‌ರ್

ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 59 ವರ್ಷದ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಟುಕ್ ಅವರನ್ನು ಶನಿವಾರ ಬೆಳಗ್ಗೆ ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

20 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಾಂಗ್ಟುಕ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ ಕಾರ್ಯಕರ್ತರ ಪ್ರತಿಭಟನೆ ಹಾಗೂ ಘೋಷಣೆಗಳ ನಡುವೆಯೇ ಶನಿವಾರ ಮುಂಜಾನೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು, 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್‌ಚುಕ್‌ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ವಾಂಗ್ಟುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ, ದೆಹಲಿ ಹೈಕೋರ್ಟ್‌ ಆದೇಶ ಹಾಗೂ ತಜ್ಞ ವೈದ್ಯರ ಸಲಹೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ವೈದ್ಯಕೀಯ ಆರೈಕೆಗಾಗಿ ಸೋನಂ ವಾಂಗ್ಟುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಹೈಕೋರ್ಟ್ ಆದೇಶ ಪಾಲಿಸುವ ಸಂದರ್ಭದಲ್ಲಿ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದ್ದರಿಂದ ಸಣ್ಣ ಪ್ರಮಾಣದ ಗೊಂದಲ ಉಂಟಾಯಿತು. ಆದರೆ ಪೊಲೀಸರು ಗರಿಷ್ಠ ಸಂಯಮ ವಹಿಸಿ ಕಾರ್ಯಾಚರಣೆಯನ್ನು ಸುರಕ್ಷಿತವಾಗಿ ಪೂರ್ಣಗೊಳಿಸಿದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾಕಾರರು ಆದಷ್ಟು ಬೇಗ ಶಾಂತಿಯುತವಾಗಿ ಸ್ಥಳವನ್ನು ತೆರವುಗೊಳಿಸುವಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now