ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಿದೆ

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಿದೆ

0Shares

ಇದರ ಬೆನ್ನಲ್ಲೇ, ಜನರು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೆಲವು ಜಿಲ್ಲಾಡಳಿತಗಳು ಮಾರ್ಗಸೂಚಿ ಬಿಡುಗಡೆ ಮಾಡಿವೆ.

ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

ಸಾಧ್ಯವಾದಷ್ಟು ಹಗುರವಾದ ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು ಛತ್ರಿ/ಟೋಪಿ ಬೂಟುಗಳು ಅಥವಾ ಚಪ್ಪಲ್​ಗಳನ್ನು ಬಳಸಿ.

ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ.

ತಲೆ ಕುತ್ತಿಗೆ ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ.

ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಆನಿಸಿದರೆ, ತಕ್ಷಣ ವೈಧ್ಯರನ್ನು ಭೇಟಿ ಮಾಡಿ.

ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ ನಿಂಬೆ ನೀರು ಮಜ್ಜಿಗೆ ಇತ್ಯಾದಿಗಳನ್ನು ಬಳಸಿ.

ಇದು ದೇಹದಲ್ಲಿ ನೀರಿನ ಅಂಶ ಹೆಚ್ಚು ಮಾಡಲು ಮತ್ತು ಡಿಹೈಡ್ರೇಷನ್ ತಡೆಯಲು ಸಹಾಯ ಮಾಡುತ್ತದೆ.

ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು ಕಟರ್‌ಗಳು ಅಥವಾ ಸೆನ್‌ಶೇಡ್ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

ಉತ್ತರ ಕನ್ನಡ ಜಿಲ್ಲಾಡಳಿತದಿಂದ ವಿಶೇಷ ಎಚ್ಚರಿಕೆ ಸಂದೇಶ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now