
ದಿನಾಂಕ 18-04-2026 ರಾತ್ರಿ 7:45 ಗಂಟೆಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬಿದ್ರಿ ಶ್ರೀ ನಾರಾಯಣ ಗುರು ಮಂದಿರದ ಬಳಿ ಮುಲ್ಕಿ ಕಾರ್ನಾಡಿನ ನಿವಾಸಿ ವಾಸುದೇವ ಶೆಟ್ಟಿಗಾರ್ ಎಂಬವರು ತನ್ನ ತಮ್ಮನ KA19EH6946 ನೇ YAMAHA FZ ಮೋಟಾರ್ ಸೈಕಲ್ ಅನ್ನು ನಿಲ್ಲಿಸಿ ರಸ್ತೆ ಬದಿಯಲ್ಲಿದ್ದ ಕ್ಯಾಂಟೀನ್ ನಲ್ಲಿ ತಿಂಡಿ ತಿನ್ನಲು ಹೋಗಿ ವಾಪಸು ಬಂದು ನೋಡಿದಾಗ ಮೋಟಾರ್ ಸೈಕಲ್ ಅಲ್ಲಿ ಇರದ ಕಾರಣ ಸದರಿ ಮೋಟಾರ್ ಸೈಕಲ್ ಅನ್ನು ಯಾರೋ ಕಳವು ಮಾಡಿರಬೇಕು ಎಂದು ನೀಡಿದ ದೂರಿನಂತೆ ಪಡುದಿದ್ರೆ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್ ವಿಜಯಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ರವರ ಮಾರ್ಗದರ್ಶನದಂತೆ ಪಡುಬಿದ್ರಿ ಪೊಲೀಸ್ ಠಾಣಾ ಪಿಎಸ್ಐ ಸಕ್ತಿವೇಲು ಈ ಮತ್ತು ಅನಿಲ್ ಕುಮಾರ್ ಟಿ ನಾಯಕ್ ರವರು ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಎಂಬಾತನನ್ನು ವಶಕ್ಕೆ ಪಡೆದು ಆದ್ದರಿಂದ ಆತನಿಂದ ಕಳವು ಮಾಡಿದ ರೂಪಾಯಿ 20,000/- ಮೌಲ್ಯದ KA19EH6946 ನೇ YAMAHA FZ ಮೋಟಾರ್ ಸೈಕಲ್ ಅನ್ನು ಸ್ವಾಧೀನ ಪಡಿಸಿಕೊಳ್ಳಲಾಯಿತು. ಸಿಬ್ಬಂದಿಗಳಾದ ಎ ಎಸ್ ಐ ರಾಜೇಶ್ ಪಿ, ಹೆಚ್ ಸಿ ಕೃಷ್ಣಪ್ರಸಾದ್, ಅಶ್ವಿನ್ ಕುಮಾರ್, ಪಿಸಿ ಸಂದೇಶ್ ಭಂಡಾರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.
ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನಮ್ಮ ವರದಿಗಾರರು
ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now