
ಪಡುಬಿದ್ರೆ: ನ.7: ಹೆಜಮಾಡಿಯ ಹಿರಿಯ ಕಾಂಗ್ರೆಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಆಗಿರುವ ನಾರಾಯಣ ಪೂಜಾರಿ (78) ಇಂದು ಮುಂಜಾನೆ ನಿಧನರಾದರು.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಕಾಪು ಕ್ಷೇತ್ರದ ಚಾಲಗೇಣಿ ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದ ಅವರು, 1970ರ ದಶಕದಲ್ಲಿ ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಪಾರ ಶ್ರಮ ವಹಿಸಿದ್ದರು.ಉಡುಪಿ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now