
ಪಂಜಾಬ್ ನ ಲೂಧಿಯಾನದ ಗುರುನಾನಕ್ ಕ್ರೀಡಾಂಗಣದಲ್ಲಿ ಸೆ.1ರಿಂದ 3ರವರೆಗೆ ನಡೆದ 21 ನೇ ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 18ರ ವಯೋಮಾನದವರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಜಿ.ಎಂ.ಕೀರ್ತಿ ಅವರು 1.68 ಮೀಟರ್ ಜಿಗಿದು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪುರಸ್ಕೃತರಾಗಿದ್ದಾರೆ.
ಇವರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ನಿವಾಸಿ ಮೋನಪ್ಪ ಮತ್ತು ಲಲಿತಾ ಅವರ ಪುತ್ರಿಯಾಗಿರುತ್ತಾರೆ. ಅವರು ದೈಹಿಕಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಗೌಡ ಬಾರ್ತಿಕುಮೇರು, ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now