ಪ್ರಮೋದ್ ಮಧ್ವರಾಜ್ ಜನ್ಮದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ

ಪ್ರಮೋದ್ ಮಧ್ವರಾಜ್ ಜನ್ಮದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ

0Shares

ಸತತ ಎರಡನೇ ಬಾರಿಗೆ ಶ್ರೀ ಪ್ರಮೋದ್ ಮಧ್ವರಾಜ್ ಮಾಜಿ ಸಚಿವರು ಕರ್ನಾಟಕ ಸರ್ಕಾರ ಅವರ ಜನ್ಮದಿನದ ಪ್ರಯುಕ್ತ ಗುರುವಾರ 17 ಅಕ್ಟೋಬರ್ ದಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ (ರಿ) ಕುಂದಾಪುರ ಇವರು ಆಯೋಜಿಸಿದ್ದ ಶ್ರೀ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಇವರ ಸಹಯೋಗದೊಂದಿಗೆ ಬ್ರಹತ್ ರಕ್ತದಾನ ಶಿಬಿರವನ್ನು ಗೊ. ಡಾ ಎಡ್ತೆರೆ ನರಸಿಂಹ ಶೆಟ್ಟಿ ಸಭಾ ಮಂಚ ರೋಟರಿ ಕ್ಲಬ್ ಕುಂದಾಪುರ ಇಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಮಾನ್ಯ ಶ್ರೀ ಪ್ರಮೋದ್ ಮಧ್ವರಾಜ್, ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೋಡ್ಗಿ, ಮಾಜಿ ಶಾಸಕರಾದ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶ್ರೀ ಮೊಹಾನ್ ದಾಸ್ ಶೆಣೈ, ಅಧ್ಯಕ್ಧರು ಪುರಸಭೆ ಕುಂದಾಪುರ, ಡಾ| ನಾಗೇಶ್ ಫಿಜಿಶಿಯನ್ ಸರಕಾರಿ ಆಸ್ಪತ್ರೆ, ಕುಂದಾಪುರ, ಜಯಕರ್ ಶೆಟ್ಟಿ, ಸಭಾಪತಿಗಳು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ, ಡಾ| ವೇದಮೂರ್ತಿ ಗಾಯತ್ರಿ ಚೆನ್ನ ಕೇಶವ ಭಟ್, ಅನಗಳ್ಳಿ, ರೋವನ್ ಡಿ’ಕೋಸ್ಟ, ಅಧ್ಯಕ್ಷರು ಲಯನ್ಸ್ ಕ್ಲಬ್, ಹಂಗಳೂರು ಇವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಬಹಳಷ್ಟೂ ಬಾರಿ ರಕ್ತದಾನ ಮಾಡಿದ ಮೂವರನ್ನು ಸನ್ಮಾನಿಸಲಾಯಿತು. ರಾಜ್ಯ ಮಟ್ಟದ ಮಹನೀಯರು ರಕ್ತವನ್ನು ಸ್ವಯಂ ಪ್ರೇರಿತರಾಗಿ ರಕ್ತದಾನದ ಮೂಲಕ ನೀಡಿದರು. ದಿವ್ಯಂಗಿಗಳಾದ ಶ್ರೀ ಗಣೇಶ್ ಪಂಜಿಮಾರ್ ಇವರು ತಾನೇ ಬಿಡಿಸಿದ ಪ್ರಮೋದ್ ಮಧ್ವರಾಜ್ ಅವರ ಭಾವಚಿತ್ರವನ್ನು ಹಸ್ತಾಂತರಿಸಿದರು..

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now