ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ

ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ
0Shares

ಪುತ್ತೂರು: ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಉಂಟಾಗಿರುವ ವಿದ್ಯುತ್ ವ್ಯತ್ಯಯ ಮತ್ತು ಲೋ-ವೋಲ್ವೇಜ್ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ವತಿಯಿಂದ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಟ್ರಸ್ಟ್‌ನ ಪದಾಧಿಕಾರಿಗಳು ಮೆಸ್ಕಾಂ ಇಲಾಖೆಯ ಓ&ಎಂ-1 ಶಾಖಾಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರನ್ನು ಭೇಟಿ ಮಾಡಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು.

ಕಳೆದ ಕೆಲವು ದಿನಗಳಿಂದ ಪುತ್ತೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಕೆಲವು ಕಡೆಗಳಲ್ಲಿ ಲೋ-ವೋಲ್ವೇಜ್ ಸಮಸ್ಯೆ ಕಾಣಿಸಿಕೊಂಡಿದ್ದು, ಇನ್ನೂ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿನ ಪೂರೈಕೆಗೂ ಅಡಚಣೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now