
ಪುತ್ತೂರು ನಗರ ಪೊಲೀಸ್ ಠಾಣಾ ಅ.ಕ್ರ:
51/2012 ಹಾಗೂ ಅ.ಕ್ರ:52/2012 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55) (ಪ್ರಸ್ತುತ ವಾಸ: ಪದವು, ಮಂಗಳೂರು) ಎಂಬಾತನನ್ನು ಮಂಗಳೂರು, ಕುಲಶೇಖರ, ಬಿಕರ್ನಕಟ್ಟೆ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ದಿನಾಂಕ: 27.02.2026 ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಮುಂದುವರಿದಂತೆ ಮಾನ್ಯ ನ್ಯಾಯಾಲಯದಲ್ಲಿ ಷರತ್ತು ಬದ್ಧ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ .5:18/2026, ថ໐: 269 BNS 2023 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now