ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..

ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..
0Shares

ಪುತ್ತೂರು, ಜೂನ್ 17: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಪೋಷಕರ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘ (PTA) ರಚನಾ ಸಭೆಯು ಇತ್ತೀಚೆಗೆ ನಡೆಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಗಣಿತಶಾಸ್ತ್ರ ಉಪನ್ಯಾಸಕಿ ಪಲ್ಲವಿ ಪಿ. ಸ್ವಾಗತಿಸಿ, ಪೋಷಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸುಪ್ರೀತ್ ಕೆ.ಸಿ. ವಹಿಸಿದ್ದರು.ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಶಿಸ್ತು, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ವೃತ್ತಿ ಮಾರ್ಗದರ್ಶನ ಹಾಗೂ ಕಾಲೇಜಿನ ಸಮಗ್ರ ಅಭಿವೃದ್ಧಿಯಲ್ಲಿ ಪೋಷಕರ ಸಕ್ರಿಯ ಪಾತ್ರದ ಕುರಿತು ಸಮಗ್ರ ಚರ್ಚೆ ನಡೆಯಿತು.

ನಂತರ 2026-27ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಯಾಸೀ‌ರ್, ಉಪಾಧ್ಯಕ್ಷರಾಗಿ ಸದಾಶಿವ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಆಶಾ ನಾಯಕ್ ಆಯ್ಕೆಯಾದರು.ಸದಸ್ಯರಾಗಿ ರಶೀದ್ ವಿಟ್ಲ, ಸೀಮಾ ರಾವ್, ಸಿಲ್ವೆಸ್ಟರ್ ಎಲ್ವಿನ್ ರೊಡ್ರಿಗಸ್, ಸುಷ್ಮಾ ಭಟ್, ಇಂದಿರಾ ಕೆ.ಎಸ್., ಮೊಹಮ್ಮದ್ ರಫೀಕ್, ಕೆ. ಅಬೂಬಕ್ಕರ್, ಶೆರಿನ್ ಬಾನು ಹಾಗೂ ಕೃಷ್ಣಪ್ಪ ಪೂಜಾರಿ ಆಯ್ಕೆಯಾದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now