ಪುತ್ತೂರು ಬಸ್‌ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

ಪುತ್ತೂರು ಬಸ್‌ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!
0Shares

ಪುತ್ತೂರು, ಜು.2: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಯುವತಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆದ ಘಟನೆ ವರದಿಯಾಗಿದೆ.

ಘಟನಾ ಸ್ಥಳದಲ್ಲಿ ಕೆಲವರು ಜಮಾಯಿಸಿ ಪರಸ್ಪರ ವಾಗ್ವಾದ ನಡೆಸಿದ್ದು, ಬಳಿಕ ತಳ್ಳಾಟ-ನೂಕಾಟವೂ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಘಟನೆಗೆ ಸಂಬಂಧಿಸಿದವರು ಅಲ್ಲಿಂದ ತೆರಳಿದ್ದರು ಎಂದು ತಿಳಿದು ಬಂದಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಪೊಲೀಸರು ಘಟನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now