ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!
0Shares

ಪುತ್ತೂರು: ಕಷ್ಟದಲ್ಲಿರುವ ಬಡ ಕುಟುಂಬವೊಂದಕ್ಕೆ ನೆರವಿನ ಹಸ್ತ ಚಾಚುವ ಮೂಲಕ ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕ ಇದರ ಸದಸ್ಯರು ಮಾನವೀಯತೆ ಮೆರೆದಿದ್ದಾರೆ.

ಅರಿಯಡ್ಕ ಗ್ರಾಮದ ಎಂಡೆಸಾಗುವಿನ ಸಾರಮ್ಮ ಎಂಬವರ ಪುತ್ರ ಕಳೆದ 32 ವರ್ಷಗಳಿಂದ ಮನೆಯಲ್ಲಿ ತಾಯಿಯ ಆರೈಕೆಯಲ್ಲಿದ್ದು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಬಡ ಮಹಿಳೆಯ ನಿವಾಸಕ್ಕೆ ಆ.9ರಂದು ಭೇಟಿ ನೀಡಿದ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಅವರಿಗೆ ಆರ್ಥಿಕ ನೆರವಿನ ಚೆಕ್ ಅನ್ನು ಹಸ್ತಾಂತರಿಸಿದರು.

ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಶ್ರೀ ವಿಷ್ಣು ಯುವಶಕ್ತಿ ಬಳಗವು, ಸಂಕಷ್ಟದಲ್ಲಿರುವ ಕುಟುಂಬದ ಪರಿಸ್ಥಿತಿಯನ್ನು ಅರಿತು ಈ ನೆರವನ್ನು ನೀಡಿದ್ದು ಬಳಗದ ಈ ಸತ್ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಂಘಟನೆಯ ಪ್ರೋತ್ಸಾಹಕರಾದ ಚಂದ್ರಿಕಾ ಸ್ವಾಮಿನಗರ ಹಾಗೂ ಸುಜಾತಾ ರೈ ಸ್ವಾಮಿನಗರ ಅವರು ಸಾರಮ್ಮ ಅವರಿಗೆ ಚೆಕ್‌ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ರಾಜೇಶ್ ಕೆ ಮಯೂರ ಮಾತನಾಡಿ ಸಂಘಟನೆಯ ಈ ಒಂದು ಮಾನವೀಯತೆ ಕಾರ್ಯಕ್ಕೆ ಕೈ ಜೋಡಿಸಿ ಆರ್ಥಿಕವಾಗಿ ಸಹಾಯ ಮಾಡಿದ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now