
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ
(ಆರ್‌ಎಸ್‌ಎಸ್) ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಹಾಗೂ ಪುಣಚ ಕೋ-ಆಪರೇಟಿವ್ ಸೊಸೈಟಿಯ ಮಾಜಿ ನಿರ್ದೇಶಕಿ ಶ್ರೀಮತಿ ಭಾರತಿ (54) ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು.
ಪುಣಚ ಗ್ರಾಮದ ಅಜ್ಜಿನಡ್ಕ ಸಮೀಪದ ನೀರ್ಕಜೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ ಭಾರತಿ ಅವರಿಗೆ ಇಂದು ಬೆಳಗ್ಗೆ ದಿಢೀರ್ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ ಜಯಶ್ಯಾಮ್, ಪುತ್ರ ಅಜೇಯ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now