
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾದ ರಾಷ್ಟ್ರೀಯ ಕ್ರೀಡಾ ದಿನಾಚರಣೆ-2026ರ ಅಂಗವಾಗಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ನ ಈಜುಗಾರರು ಉತ್ತಮ ಸಾಧನೆ ಮಾಡಿದ್ದು, ಒಟ್ಟು 16 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸ್ಪರ್ಧೆಯಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ನ ಚರಿತ್ ಅವರು 50 ಮೀಟರ್ ಬಟರ್ಫ್ಟ್ ವಿಭಾಗದಲ್ಲಿ ಚಿನ್ನದ ಪದಕ, 50 ಮೀಟರ್ ಫ್ರೀಸ್ಟೈಲ್ನಲ್ಲಿ ಕಂಚಿನ ಪದಕ ಹಾಗೂ 100 ಮೀಟರ್ ಫ್ರೀಸ್ಟೈಲ್ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡರು. ಲಿಖಿತ್ ಅವರು 100 ಮೀಟರ್ ಫ್ರೀಸ್ಟೈಲ್ನಲ್ಲಿ ಕಂಚಿನ ಪದಕ, 50 ಮೀಟರ್ ಬ್ರೆಸ್ಟ್ಸ್ಟೋಕ್ನಲ್ಲಿ ಬೆಳ್ಳಿಯ ಪದಕ ಹಾಗೂ 50 ಮೀಟರ್ ಫ್ರೀಸ್ಟೈಲ್ನಲ್ಲಿ ಬೆಳ್ಳಿಯ ಪದಕ ಗಳಿಸಿದರು.
ಸಾಕ್ಷತ್ ಅವರು 50 ಮೀಟರ್ ಬ್ರೆಸ್ಟ್ಸ್ಟೋಕ್, 50 ಮೀಟರ್ ಫ್ರೀಸ್ಟೈಲ್ ಹಾಗೂ 50 ಮೀಟರ್ ಬ್ಯಾಕ್ಸ್ಟೋಕ್ ವಿಭಾಗಗಳಲ್ಲಿ ತಲಾ ಕಂಚಿನ ಪದಕ ಪಡೆದು ಗಮನಾರ್ಹ ಸಾಧನೆ ಮಾಡಿದರು.
ಪೂರ್ವಿಕಾ ಅವರು 50 ಮೀಟರ್ ಬ್ರೆಸ್ಟ್ಸ್ಟೋಕ್ನಲ್ಲಿ ಕಂಚಿನ ಪದಕ ಹಾಗೂ 50 ಮೀಟರ್ ಬ್ಯಾಕ್ಸ್ಟೋಕ್ನಲ್ಲಿ ಬೆಳ್ಳಿಯ ಪದಕ ಗಳಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now