
ಪುತ್ತೂರು ಜಾನಪದ ಕ್ರೀಡೆಗಳಲ್ಲೊಂದಾದ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಮಾ.01ಮತ್ತು 02 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು ಇದರ ಅಂಗವಾಗಿ ಕಂಬಳದ ಕರೆ ಮುಹೂರ್ತ ಜ 27ರಂದು ಪುತ್ತೂರು ಮಹಾಲಿಂಗೇಶ್ವರ ದೇವರ ಮಾರುಗದ್ದೆಯಲ್ಲಿ ನಡೆಯಿತು.
ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಕೋಶಾಧಿಕಾರಿ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ದೀಪ ಬೆಳಗಿಸಿ ತೆಂಗಿನಕಾಯಿ ಒಡೆಯುವ ಮೂಲಕ ಕರೆಯನ್ನು ಉದ್ಘಾಟಿಸಿ ಮಾತನಾಡಿ ಶ್ರೀ ಮಹಾಲಿಂಗೇಶ್ವರನ ದಯಯಿಂದ ಕಳೆದ ೩೨ ವರ್ಷಗಳಿಂದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಾ ಬರುತ್ತಿದ್ದು ಮುಂದೆಯೂ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಯುವಂತಾಗಲಿ ಎಂದು ಪ್ರಾರ್ಥಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























