
ಕರ್ನಾಟಕದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ.
ಇದೀಗ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯೊಂದನ್ನು ನೀಡಿದ್ದು, ಜೂನ್ 14 ರಿಂದ 16 ವರೆಗೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೆ ಭಾರೀ ಮಳೆಯ ಕಾರಣಕ್ಕೆ ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಮುಂದೂಡುವಂತೆ ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿ.ಕೆ.ಎಂ.ಎಸ್. ವಿಭಾಗ, ವಲಯ ಕೃಷಿ ಮತ್ತು ತೋಟಗಾರಿಕಾ ಇಲಾಖೆ, ಬ್ರಹ್ಮಾವರ ಇವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now