ಸ್ಯಾಂಡಲ್​​ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ.

ಸ್ಯಾಂಡಲ್​​ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ.

0Shares

ಸ್ಯಾಂಡಲ್​​ವುಡ್‌ನ ಯುವ ನಟ ಸಂತೋಷ್ ಬಾಲರಾಜ್ (38) ನಿಧನರಾಗಿದ್ದಾರೆ. ಇಂದು ಬೆಳಗ್ಗೆ10 ಗಂಟೆ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.

ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಇಂದು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಒಬ್ಬ ತಂಗಿ ಹಾಗೂ ತಾಯಿಯನ್ನು ಬಿಟ್ಟು ಸಂತೋಷ್ ಈಗ ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಎಲ್ಲರ ಜತೆ ಸ್ನೇಹಮಯ ವ್ಯಕ್ತಿತ್ವ ಹೊಂದಿದ್ದ ಸಂತೋಷ್ ಒಂದೂವರೆ ವರ್ಷದ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದರು. ಇನ್ನೂ ಸಂತೋಷ್ ಬಾಲರಾಜ್ ಸದ್ಯದಲ್ಲೇ ಮದುವೆಯಾಗುವ ಸಿದ್ದತೆಯನ್ನೂ ನಡೆಸಿದ್ದರು ಎಂದು ತಿಳಿದುಬಂದಿದೆ. ಗಣಪ, ಕರಿಯ-2, ಕೆಂಪ, ಬರ್ಕ್ಲೀ ಚಿತ್ರಗಳಲ್ಲಿ ಸಂತೋಷ್ ಅಭಿನಯಿಸಿ ಅತೀ ಹೆಚ್ಚು ಜನ ಮನ್ನಣೆಗಳಿಸಿದ್ದರು. ಇವರ ಅಭಿನಯದ ಸತ್ಯ ಚಿತ್ರ ಇನ್ನಷ್ಟೇ ರಿಲೀಸ್​​ ಆಗಬೇಕಿತ್ತು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now