
ದಿನಾಂಕ 07/08/2026 ರಂದು ಮಧ್ಯಾಹ್ನ 3:45 ಗಂಟೆಗೆ ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ನ ಮಾಲಕ ಡೇವಿಡ್ ಡಿಸೋಜಾ ಎಂಬವರನ್ನು ಮೋಟಾರು ಸೈಕಲಿನಲ್ಲಿ ಬಂದ ಆರೋಪಿತರ ಪೈಕಿ ಸಹಸವಾರನು ಪಿಸ್ತೂಲ್ ನಿಂದ ಡೇವಿಡ್ ಡಿಸೋಜಾರವರ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಿದ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಯಲ್ಲಿರುತ್ತದೆ.
ಸದ್ರಿ ಪ್ರಕರಣದಲ್ಲಿ ಈಗಾಗಲೇ ನೇರವಾಗಿ ಬಾಗಿಯಾದ ಆರೋಪಿತರಾದ ಅನ್ಮೋಲ್ ರಸ್ತೋಗಿ ಮತ್ತು ಜಿಯಾಹುಲ್ ವಾಜುಲ್ ಶೇಖ್ @ ದೀಪಕ್ ರವರನ್ನು ದಸ್ತಗಿರಿ ಮಾಡಲಾಗಿ ಸದ್ರಿ ಆರೋಪಿತರನ್ನು ಪೊಲೀಸ್ ಕಸ್ಟಡಿಗೆ ಪಡೆದು ಸುಧೀರ್ಘ ವಿಚಾರಣೆಗೊಳಪಡಿಸಿ, ಆರೋಪಿತರ ಬ್ಯಾಂಕ್ ಖಾತೆ ವಿವರ ಪಡೆದು ಪರಿಶೀಲಿಸಿದ ನಂತರ ಸದರಿ ಪ್ರಕರಣದಲ್ಲಿ ಆರೋಪಿತರಿಗೆ ಮೊಹಮ್ಮದ್ ಇರ್ಷಾದ್ ಹಾಗೂ ಚಿರಾಗ್ ಪೂಜಾರಿ ಎಂಬ ಆರೋಪಿತರು ಹಣ ಜಮಾ ಮಾಡಿ ಆರೋಪಿಗಳು ಕೃತ್ಯಕ್ಕೆ ಸಹಕರಿಸಿರುವುದು ತಿಳಿದುಬಂದಿದ್ದು ಸದ್ರಿ ಆರೋಪಿತರನ್ನು ದಸ್ತಗಿರಿ ಮಾಡಿರುವುದಾಗಿದೆ.
ನಂತರ ಎಲ್ಲಾ ಆರೋಪಿತರ ಬ್ಯಾಂಕ್ ಖಾತೆ ವಿವರ ಪಡೆದು ಪರಿಶೀಲಿಸಿ, ಮೊಬೈಲ್ ಹಾಗೂ ಕರೆ ವಿವರಗಳನ್ನು ವಿಶ್ಲೇಷಣೆಗೊಳಪಡಿಸಿ ಹಾಗೂ ಆರೋಪಿತರ ಚಲನ ವಲನಗಳ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ ನಂತರ ಸದ್ರಿ ಪ್ರಕರಣದಲ್ಲಿ ಕೊಲೆಗೆ ಅಪರಾಧಿಕ ಒಳಸಂಚು ಮಾಡಿ ಈ ಕೃತ್ಯ ಮಾಡಲು ಹಣಕಾಸು ಪೂರೈಕೆ ಮಾಡಿದ ಪ್ರಮುಖ ಈ ಕೆಳಕಂಡ ಆರೋಪಿತರಾದ:
ಸದಾನಂದ ದೇವಾಡಿಗ @ ಸದಾನಂದ ಎ( 41) ಅದಮಾರು ಮಠದ ಬಳಿ, ಅದಮಾರು, ಬಡಾ ಎರ್ಮಾಳ್ ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಮತ್ತು ಕಿಶೋರ್ ರಾಮ ಪೂಜಾರಿ ಪ್ರಾಯ (47 ) ಮಹಾಲಕ್ಷ್ಮಿ ದೇವಸ್ಥಾನದ ಬಳಿ ಉಚ್ಚಿಲ ಬಡಾ ಗ್ರಾಮ ಕಾಪು ತಾಲೂಕು ಇವರಲ್ಲಿ ಆರೋಪಿ ಸದಾನಂದ ದೇವಾಡಿಗ ಈತನನ್ನು ದಸ್ತಗಿರಿ ಮಾಡಿ ಈತನಿಂದ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ಫೋನ್, ಒಂದು ಮೋಟಾರ್ ಸೈಕಲ್ ಹಾಗೂ ನಗದು ವಶಕ್ಕೆ ಪಡೆದುಕೊಂಡಿದ್ದು, ಆರೋಪಿ ಕಿಶೋರ್ ರಾಮ ಪೂಜಾರಿ ಈತನನ್ನು ದಸ್ತಗಿರಿ ಮಾಡಿ ಈತನಿಂದ ಕೃತ್ಯಕ್ಕೆ ಬಳಸಿದ ಮೂರು ಮೊಬೈಲ್ ಫೋನ್, ಒಂದು ಕ್ರೇಟಾ ಕಾರು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿತರನ್ನು ಮಾನ್ಯ ನ್ಯಾಯಲಯಕ್ಕೆ ಹಾಜರುಪಡಿಸಲಾಗುವುದು.
ಸದರಿ ಪ್ರಕರಣದಲ್ಲಿನ ನೇರವಾಗಿ ಭಾಗಿಯಾದ ಆರೋಪಿ ರಾಜು ಈತನ ಮೇಲೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡಿದ್ದು ಜಿಲ್ಲಾ ಸರ್ಕಾರಿ ಆಸ್ಪತ್ರೆ ಅಜ್ಜರಕಾಡು ಇಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು ಸದ್ರಿ ಆರೋಪಿಯು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಿಸಲಾಗುವುದು.
ತನಿಖೆ ಮುಂದುವರಿದಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now