
ಶಿರ್ವ: ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತದ 80ನೇ ಸ್ವಾತಂತ್ರೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಶಾಲಾ ಸಂಚಾಲಕರಾದ ಅತಿ ವಂದನೀಯ ಫಾ. ಚಾರ್ಲ್ಸ್ ಮಿನೇಜಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ವಾಯುಪಡೆಯ ಮಾಜಿ ಸರ್ಜೆಂಟ್ ಶ್ರೀ ಫೆಲಿಕ್ಸ್ ಡಿಸೋಜಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ಚರ್ಚಿನ ಸಹಾಯಕ ಧರ್ಮಗುರು ವಂ. ಫಾ. ಅನಿಲ್ ರೊಡ್ರಿಗಸ್, ಉಪಾಧ್ಯಕ್ಷ ಶ್ರೀ ಜುಲಿಯಾನಾ ರೊಡ್ರಿಗಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಪ್ರಿಯಾ ಡಿಸೋಜಾ, ಪ್ರಾಂಶುಪಾಲ ವಂ. ಫಾ. ರೊಲ್ವಿನ್ ಜೆ. ಅರಾನ್ಹಾ, ಶಿಕ್ಷಕ-ರಕ್ಷಕ ಹಾಗೂ ಆಡಳಿತ ಮಂಡಳಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮುಖ್ಯ ಅತಿಥಿ ಶ್ರೀ ಫೆಲಿಕ್ಸ್ ಡಿಸೋಜಾ ಅವರು ಬೆಳಿಗ್ಗೆ 8.30ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತಮ್ಮ ಸಂದೇಶದಲ್ಲಿ ಅವರು ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಜವಾಬ್ದಾರಿಯುತ ಹಾಗೂ ದೇಶಭಕ್ತ ನಾಗರಿಕರಾಗಿ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ದೇಶಸೇವೆಯ ಮನೋಭಾವ ಬೆಳೆಸಿಕೊಂಡು ಸಶಸ್ತ್ರ ಪಡೆಗಳಿಗೆ ಸೇರುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಅಧ್ಯಕ್ಷತೆ ವಹಿಸಿದ್ದ ಫಾ. ಚಾರ್ಲ್ಸ್ ಮಿನೆಜಿಸ್ ಅವರು ಕೂಡ ವಿದ್ಯಾರ್ಥಿಗಳು ದೇಶಪ್ರೇಮ, ಶಿಸ್ತು ಮತ್ತು ಜವಾಬ್ದಾರಿಯುತ ನಾಗರಿಕತ್ವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ನೃತ್ಯಗಳು ಹಾಗೂ ಕಿರು ನಾಟಕ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 10ನೇ ತರಗತಿಯ ಅಲೀನಾ ರುತ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು. ಸಾರ್ಥ್ ಶೆಟ್ಟಿ ಸ್ವಾಗತಿಸಿದರು. ಅವಿಶ್ ಆಳ್ವಾ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಅನಿಕಾ ಆಚಾರ್ಯ ವಂದನಾರ್ಪಣೆ ಸಲ್ಲಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾಪ್ತಿ ನಾಯಕ್ ನಿರೂಪಿಸಿದರು.

ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಸಂದೇಶ ಸಾರಿದ ಕಾರ್ಯಕ್ರಮವು ಎಲ್ಲರಲ್ಲೂ ದೇಶದ ಬಗ್ಗೆ ಹೆಮ್ಮೆ ಮತ್ತು ಜವಾಬ್ದಾರಿಯ ಭಾವನೆ ಮೂಡಿಸುವ ಮೂಲಕ ಯಶಸ್ವಿಯಾಗಿ ಸಂಪನ್ನಗೊಂಡಿತು.


Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now