
ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ, ಶಿರ್ವ ಸಂಸ್ಥೆಯು 1976 ರಲ್ಲಿ ಸ್ಥಾಪನೆಯಾಗಿ 2026 ಕ್ಕೆ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ವರ್ಷಾಚರಣೆಯನ್ನು ಹಮ್ಮಿಕೊಂಡಿದೆ.
ಕುತ್ತಾರು, ಕಳತ್ತೂರು, ಪಿಲಾರು, ಸಾಂತೂರು ಹಾಗೂ ಶಿರ್ವ ಗ್ರಾಮಗಳನ್ನು ಕಾರ್ಯವ್ಯಾಪ್ತಿಯನ್ನಾಗಿ ಹೊಂದಿರುವ ಸಂಘವು ಐದು ದಶಕಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಸುವರ್ಣ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 4 ರಿಂದ 10 ರವರೆಗೆ ‘ಸುವರ್ಣ ಸಪ್ತಾಹ’ವನ್ನು ಆಚರಿಸಲಿದೆ.
ಪ್ರಧಾನ ಕಚೇರಿ ಹಾಗೂ ಶಾಖಾ ಕಚೇರಿಗಳಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಸುವರ್ಣ ಸಪ್ತಾಹವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಸಂಘದ ಸದಸ್ಯರು, ಗ್ರಾಹಕರು ಹಾಗೂ ಸಾರ್ವಜನಿಕರು ಈ ಐತಿಹಾಸಿಕ ಸಂಭ್ರಮದಲ್ಲಿ ಭಾಗವಹಿಸುವಂತೆ ಸಂಘದ ಆಡಳಿತ ಮಂಡಳಿ ಮನವಿ ಮಾಡಿದೆ.
ಸಂಘದ ಅಧ್ಯಕ್ಷರಾದ ಕುತ್ತಾರು ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ವೀರೇಂದ್ರ ಪಾಟ್ಕರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ, ಎಲ್ಲಾ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಸುವರ್ಣ ಮಹೋತ್ಸವದ ಸಂಭ್ರಮಾಚರಣೆಗೆ ಎಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now