
ಶಿರ್ವ, ಅ. 17: ಕಾಪು ತಾಲೂಕು ಶಿರ್ವ ಗ್ರಾಮದ 26 ವರ್ಷದ ಸಾಹಿಲ್ ಎಸ್. ಆಚಾರ್ಯ ಎಂಬ ಯುವಕ ನಾಪತ್ತೆಯಾಗಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕ ಸಾಹಿಲ್ ಎಸ್. ಆಚಾರ್ಯ ಅವರು ಶಿರ್ವ ಗ್ರಾಮದ ನಿವಾಸಿ ಜಯಲಕ್ಷ್ಮೀ ಅವರ ಪುತ್ರರಾಗಿದ್ದಾರೆ. ಈ ಹಿಂದೆ ಅವರು ಶಿರ್ವದಲ್ಲಿರುವ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು ಒಂದು ತಿಂಗಳ ಹಿಂದೆ ಆ ಕೆಲಸವನ್ನು ಬಿಟ್ಟಿದ್ದ ಅವರು, ಪ್ರಸ್ತುತ ಉದ್ಯಾವರದ ಪಿತ್ರೋಡಿಯಲ್ಲಿರುವ ಮೆಡಿಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ದಿನಾಂಕ 14-10-2026ರಂದು ಬೆಳಗ್ಗೆ ಸುಮಾರು 8.30 ಗಂಟೆಗೆ ಸಾಹಿಲ್ ಅವರು ತಮ್ಮ ತಾಯಿಯನ್ನು ಶಿರ್ವದ ಕ್ಲಿನಿಕ್ಗೆ ಬಿಟ್ಟು, ನಂತರ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ತೆರಳಿದ್ದರು. ಆದರೆ, ಅಂದಿನಿಂದ ಈವರೆಗೂ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಾರೆ.
ಯುವಕ ಮನೆಗೆ ಮರಳದ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಆತಂಕಗೊಂಡಿದ್ದಾರೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 85/2026ರ ಅಡಿಯಲ್ಲಿ ಗಂಡಸು ಕಾಣೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now