
ಅಕ್ಟೋಬರ್ 18 ಭಾನುವಾರ ಹೆಜಮಾಡಿ ಗಡಿಭಾಗದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ರಾಷ್ಟ್ರೀಯ ಬೈಕ್ ರ್ಯಾಲಿ ತಂಡವನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಕಾಪುವಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳದ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರು ಇಶಿತಾ ಗುಪ್ತ (ಎಎಸ್ಪಿ) ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜಮತ್ ಅಲಿ, ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಕಾಪು ಠಾಣಾಧಿಕಾರಿ ತೇಜಶ್ವಿ, ಶಿರ್ವ ಪೊಲೀಸ್ ಠಾಣಾಧಿಕಾರಿ ಮಂಜುನಾಥ ಮರಬದ ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಶಕ್ತಿವೇಲು ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿರ್ವ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮಂಜುನಾಥ ಮರಬದ ಕಾರ್ಯಕ್ರಮದ ಪ್ರಸ್ತಾವಿಕ ಭಾಷಣ ಮಾಡಿದರು. ರಾಷ್ಟ್ರೀಯ ಬೈಕ್ ರ್ಯಾಲಿಯ ನೇತೃತ್ವ ವಹಿಸಿದ್ದ ಕ್ಯಾಪ್ಟನ್ ಅಶ್ವಿನ್ ಹಾಗೂ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ರ್ಯಾಲಿಯ ಉದ್ದೇಶ ಹಾಗೂ ಮಹತ್ವವನ್ನು ಸಾರಿದರು.ಯುವ ಜನತೆಯಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ “ಮಾದಕ ದ್ರವ್ಯಗಳ ವಿರುದ್ಧ ಹೋರಾಟ” ರಾಷ್ಟ್ರೀಯ ಮೋಟರ್ ಸೈಕಲ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣದ ಈ ಬೃಹತ್ ಜಾಗೃತಿ ಅಭಿಯಾನದಲ್ಲಿ ಸಾರ್ವಜನಿಕರು ಹಾಗೂ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಕ್ಕೆ ಅಭಿನಂದಿಸಿದರು

ಶಿರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಅಡಿಗ ಹಾಗೂ ರಿಯಾ ಶೈಲಿನ್ ಕೋರ್ಡ ಕಾರ್ಯಕ್ರಮವನ್ನು ನಿರೂಪಿಸಿದರು

ರಾಷ್ಟ್ರೀಯ ಏಕತೆ, ಸಾಮಾಜಿಕ ಜಾಗೃತಿ ಹಾಗೂ ಮಾದಕ ದ್ರವ್ಯಗಳ ವಿರುದ್ಧ ಹೋರಾಟದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಈ ರಾಷ್ಟ್ರೀಯ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿತ್ತು. ದೇಶದ ವಿವಿಧ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ರ್ಯಾಲಿಯು ರಾಷ್ಟ್ರೀಯ ಏಕತೆ, ದೇಶಪ್ರೇಮ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ಸಾರುವ ಮೂಲಕ ಸಾರ್ವಜನಿಕರ ಗಮನ ಸೆಳೆಯಿತು.
ಇಂತಹ ಜಾಗೃತಿ ಕಾರ್ಯಕ್ರಮಗಳು ಯುವಜನರಲ್ಲಿ ದೇಶಪ್ರೇಮ, ಏಕತೆಯ ಮನೋಭಾವ ಹಾಗೂ ಸಮಾಜದ ಬಗೆಗಿನ ಜವಾಬ್ದಾರಿಯನ್ನು ಬೆಳೆಸಲು ಸಹಕಾರಿಯಾಗಿವೆ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣಕ್ಕೆ ಇಂತಹ ಅಭಿಯಾನಗಳು ಮಹತ್ವದ ಕೊಡುಗೆ ನೀಡುತ್ತವೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now