
ಶಿರ್ವ, ಅ. 24: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್, ಶಿರ್ವ ಶಾಖೆಯ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮವನ್ನು ಅಕ್ಟೋಬರ್ 24ರ ಶನಿವಾರ ಬೆಳಿಗ್ಗೆ 9.30ಕ್ಕೆ ಶಿರ್ವದ ಮಹಿಳಾ ಸೌಧದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ನ ಮಂಗಳೂರು ಪ್ರಾದೇಶಿಕ ಮಾರಾಟ ವಿಭಾಗದ ಮುಖ್ಯಸ್ಥ ಸದಾಶಿವ ಅಮೀನ್ ವಹಿಸಿ ಸರ್ವರನ್ನು ಸ್ವಾಗತಿಸಿ ಪ್ರಸ್ತಾವಿಕ ಭಾಷಣ ಮಾಡಿದರು. ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀರಾಮ್ ಫೈನಾನ್ಸ್ ನ ಸಿಬ್ಬಂದಿಗಳಿಗೆ ಹಾಗೂ ಮಕ್ಕಳಿಗೆ ಶುಭ ಹಾರೈಸಿದರು. ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿ ವೇತನವನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿರ್ವ ಪರಿಸರದ ಬಡ ವಿದ್ಯಾರ್ಥಿಗಳಿಗೆ ಹಾಗೂ ವಾಹನ ಚಾಲಕ ಹಾಗೂ ಮಾಲಕರ ಸದಸ್ಯರ ಮಕ್ಕಳಿಗೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 220 ವಿದ್ಯಾರ್ಥಿಗಳಿಗೆ ತಲಾ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ರೂ.4000 ಕಾಲೇಜು ವಿದ್ಯಾರ್ಥಿಗಳಿಗೆ ರೂ.4500 ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿರ್ವ ಪೊಲೀಸ್ ಠಾಣೆಯ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮಂಜುನಾಥ್ ಮುಬಾದ್, ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ನ ಮಂಗಳೂರು ಪ್ರಾದೇಶಿಕ ಸಂಗ್ರಹ ವಿಭಾಗದ ಮುಖ್ಯಸ್ಥ ನಾಗರಾಜ್ ಬಿ., ಶಿರ್ವ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಬಬಿತಾ ಜಗದೀಶ್ ಅರಸ್,ರಾಘವೇಂದ್ರ ಸಾಲಿಯಾನ್ ಮುಖ್ಯೋಪಾಧ್ಯಾಯರು ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ, ಪಡುಬೆಳ್ಳೆ , ಶಿರ್ವ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಗಿರಿಧರ್ ಪ್ರಭು, ಅಧ್ಯಕ್ಷರು ಶಿರ್ವ ಟೆಂಪೋ ಚಾಲಕರು ಮತ್ತು ಮಾಲಕರ ಸಂಘ ಶಿರ್ವ, ಉದ್ಯಮಿ ರಾಜೇಶ್ ನಾಯ್ಕ್ ಶಿರ್ವ , ಜಿತೇಂದ್ರ ಶೆಟ್ಟಿ ಅಧ್ಯಕ್ಷರು ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ, ಹಾಗೂ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ನ ಉಡುಪಿ ಪ್ರಾದೇಶಿಕ ವ್ಯವಹಾರ ವಿಭಾಗದ ಮುಖ್ಯಸ್ಥ ಸುರೇಶ್ ಶೆಟ್ಟಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ವಿದ್ಯಾರ್ಥಿ ವೇತನವನ್ನು ವಿತರಿಸಿ ಶುಭ ಹಾರೈಸಿದರು.

ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಿಗೆ ಅಗತ್ಯವಾದ ಆರ್ಥಿಕ ನೆರವು ಮತ್ತು ಪ್ರೋತ್ಸಾಹ ನೀಡುವ ಮೂಲಕ ಅವರ ಶೈಕ್ಷಣಿಕ ಸಾಧನೆಗೆ ಬೆಂಬಲ ನೀಡುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ. ಶ್ರೀರಾಮ್ ಫೈನಾನ್ಸ್ ಒಂದು ಕಾರ್ಪೊರೇಟ್ ಸಂಸ್ಥೆಯಾಗಿದ್ದು ಕೂಡ ದೈವಿಕ ಕಾರ್ಯವನ್ನು ಮಾಡುತ್ತಿದ್ದಾರೆ. ಸಾಧಕರಿಗೆ ಸ್ಕೈ ಇಸ್ ಲಿಮಿಟ್ (sky is limit) ಒಂದು ಸಾಮಾನ್ಯ ಎಲ್ಲಮ್ಮ ವಿದ್ಯಾರ್ಥಿ ವೇತನ ಪಡೆದುಕೊಂಡು ಇವತ್ತು ಡಾ. ಎಲ್ಲಮ್ಮ ಆಗಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನಮ್ಮ ಮುಂದೆ ಕಂಗೊಳಿಸುತ್ತಿದ್ದಾರೆ, ಹಾಗೆಯೇ ನೀವು ವಿದ್ಯಾರ್ಥಿಗಳು ಉನ್ನತ ಹುದ್ದೆಗೆ ಹೋಗಬೇಕೆಂದು ಪ್ರಸಾದ್ ಶೆಟ್ಟಿ ಕರೆಕೊಟ್ಟರು.
ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ನ ಶಾಖಾಧಿಕಾರಿ ಜನಕ್ ಹಾಗೂ ಶಿರ್ವ ಶಾಖೆಯ ಸಿಬ್ಬಂದಿ ಹಾಜರಿದ್ದು, ದೀಪಿಕಾ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now