
ಉಡುಪಿ, 12 ಜನವರಿ 2025: ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಇವರ ವತಿಯಿಂದ ಇಂದು ಆದಿತ್ಯವಾರ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಅರವಿಂದ ಬೋಳಾರ್ ನಟನೆಯ ಒರಿಯಾಂಡಲ ಸರಿ ಬೋಡು ಎನ್ನುವ ತುಳು ಹಾಸ್ಯಮಯ ನಾಟಕ ಪ್ರದರ್ಶನವಾಗಲಿದೆ.
ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇವರ ಆಶ್ರಯದಲ್ಲಿ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ಅಭಿನಯಿಸುವ, ಲಯನ್ ಡಿ ಕಿಶೋರ್ ಶೆಟ್ಟಿ ನಿರ್ದೇಶನದ , ಕುಸಾಲ್ಡ್ ಮಾಣಿಕ್ಯ ಅರವಿಂದ ಬೋಳಾರ್ ನಟಿಸಿರುವ ಈ ವರ್ಷದ ಸೂಪರ್ ಹಿಟ್ ತುಳು ನಾಟಕ ಒರಿಯಾಂಡಲ ಸರಿ ಬೋಡು ಎಂಬ ನಾಟಕ ಪ್ರದರ್ಶನ ನಡೆಯಲಿದೆ.
ಸಂಜೆ 6:15 ರಿಂದ ಪ್ರಾರಂಭ ಗೊಳ್ಳುವ ಈ ನಾಟಕಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಮತ್ತು ಎಂದಿಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉಡುಪಿ ಪರಿಸರದ ಜನತೆ ಈ ನಾಟಕ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವೀ ಮಾಡಿಕೊಡಬೇಕೆಂದು ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇದರ ಗೌರವಾಧ್ಯಕ್ಷರಾದ ಸದಾಶಿವ ಅಮೀನ್ ಕಟ್ಟೆ ಗುಡ್ಡೆ, ಅಧ್ಯಕ್ಷರಾದ ಮಿಥುನ್ ಅಮೀನ್ ಸಂತೆಕಟ್ಟೆ, ಪದಾಧಿಕಾರಿಗಳಾದ ವಿಕೇಶ್ ಸುವರ್ಣ ಹೆಜಮಾಡಿ, ಮಹೇಶ್ ಪೂಜಾರಿ ಬೈಂದೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























