
ಶೀರೂರು ಪರ್ಯಾಯದ ಪೂರ್ವಭಾವಿಯಾಗಿ ಎಲ್ಲಾ ವಿಪ್ರಬಾಂಧವರೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಉಡುಪಿಯ ಶೀರೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು ಶ್ರೀ ಶ್ರೀ ವೇದವರ್ಧನ ತೀರ್ಥರು ಕೇವಲ ಅಷ್ಟಮಠಕ್ಕೆ ಸೀಮಿತವಾಗದೆ ದೇಶದೆಲ್ಲೆಡೆ ಖ್ಯಾತಿ ಗಳಿಸಿ ದೇಶಕ್ಕೆ ಮಾರ್ಗದರ್ಶನ ನೀಡುವ ಯತಿಗಳಾಗಬೇಕೆಂಬ ಸಂಕಲ್ಪ ನಮ್ಮದು. ಮುಂದಿನ ದಿನಗಳಲ್ಲಿ ಹಿಂದೂ ಸಮಾಜ ಅವರ ಮಾರ್ಗದರ್ಶನದಲ್ಲಿ ಮುಂದುವರಿಯಬೇಕು , ಶೀರೂರು ಪರ್ಯಾಯ ನಮ್ಮೆಲ್ಲರನ್ನೂ ಒಗ್ಗೂಡಿಸುವ ಪರ್ಯಾಯ ಎಂದರು. ಮಠದ ದಿವಾನರಾದ ಡಾ ಉದಯ ಸರಳತ್ತಾಯ ಮಾತನಾಡಿ ಕೃಷ್ಣ ಭಕ್ತರನ್ನು ಜೋಡಿಸುವ ಕೆಲಸ ಶೀರೂರು ಪರ್ಯಾಯದಲ್ಲಿ ಆಗಬೇಕು ಅದಕ್ಕಾಗಿ ಎಲ್ಲಾ ಭಕ್ತರು ಕೈಜೋಡಿಸಬೇಕು ಎಂದು ವಿನಂತಿಸಿದರು.
ಸ್ವಾಗತ ಸಮಿತಿಯ ಸಂಚಾಲಕರಾದ ಗೋಪಾಲಕೃಷ್ಣ ಆಸ್ರಣ್ಣ ಮಾತನಾಡಿ ಶೀರೂರು ಪರ್ಯಾಯ ಜನಸಾಮಾನ್ಯರ ಪರ್ಯಾಯ ನಾವೆಲ್ಲರೂ ವೇದವರ್ಧನ ತೀರ್ಥರ ಸಂಕಲ್ಪಗಳಿಗೆ ಸಹಕಾರ ನೀಡಬೇಕು ಈ ಕಾರ್ಯದಿಂದ ಗ್ರಾಮಕ್ಕೆ ಮತ್ತು ದೇಶಕ್ಕೂ ಒಳಿತಾಗಲಿದೆ ಎಂದರು. ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ ಮಾತನಾಡಿ ಶೀರೂರು ಪರ್ಯಾಯಕ್ಕೆ ಎಲ್ಲಾ ಸಮಾಜ ಬಾಂಧವರ ಸಹಕಾರ ವ್ಯಕ್ತವಾಗುತ್ತಿದೆ. ಎಲ್ಲರ ಸಹಕಾರದಿಂದ ಶೀರೂರು ಪರ್ಯಾಯವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು. ಉಡುಪಿ ತಾಲೂಕು ಬ್ರಾಹ್ಮಣ ಪರಿಷತ್ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯಾಯ ಮುಂದಿನ ದಿನಗಳಲ್ಲಿ ಮತ್ತಷ್ಟು ಸಭೆಗಳನ್ನು ಸಂಘಟಿಸಿ ಜವಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುವುದಾಗಿ ಹೇಳಿದರು. ಹೊರೆಕಾಣಿಕೆ ಸಮಿತಿ ಸಂಚಾಲಕ ಸುಪ್ರಸಾದ್ ಹೆಗ್ಡೆ ಪರ್ಯಾಯದ ಪೂರ್ವಭಾವಿಯಾಗಿ ನಡೆದ ಕೆಲಸ ಕಾರ್ಯಕ್ರಮಗಳು ಮತ್ತು ಮುಂದಿನ ದಿನಗಳಲ್ಲಿ ನಡೆಯಬೇಕಾದ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು.
ಉಡುಪಿ ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷ ಸಂದೀಪ್ ಮಂಜ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಸ್ವಾಗತಸಮಿತ ಕೋಶಾಧಿಕಾರಿ ಜಯಪ್ರಕಾಶ ಕೆದ್ಲಾಯ,ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ಶ್ರೀ ಮೋಹನ್ ಭಟ್,ನಂದನ್ ಜೈನ್,ತುಶಿಮಾಮದ ಅಧ್ಯಕ್ಷ ಜಯರಾಮ ಆಚಾರ್ಯ,ಯುವಬ್ರಾಹ್ಮಣ ಪರಿಷತ್ ಅಧ್ಯಕ್ಷ ರಘುಪತಿ ರಾವ್,ಮಧುಕರ ಮುದ್ರಾಡಿ ಮತ್ತು ವಿವಿಧ ಬ್ರಾಹ್ಮಣ ಸಂಘಟನೆಗಳ ಸದಸ್ಯರು ಹಾಗೂ ವಿಪ್ರಬಾಂಧವರು ಉಪಸ್ಥಿತರಿದ್ದರು. ಅಶ್ವಥ್ ಭಾರದ್ವಾಜ್ ಕಾರ್ಯಕ್ರಮ ನಿರೂಪಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now