ಅಕ್ರಮವಾಗಿ ಶ್ರೀಗಂಧ ಕೆತ್ತನೆ: ಓರ್ವ ಆರೋಪಿ ಬಂಧನ, 33.390 ಕೆ.ಜಿ. ಶ್ರೀಗಂಧ ವಶ

ಅಕ್ರಮವಾಗಿ ಶ್ರೀಗಂಧ ಕೆತ್ತನೆ: ಓರ್ವ ಆರೋಪಿ ಬಂಧನ, 33.390 ಕೆ.ಜಿ. ಶ್ರೀಗಂಧ ವಶ
0Shares

ಶಿರಸಿ:ತಾಲೂಕಿನ ಕಾನಗೋಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಕೆತ್ತನೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಅರಣ್ಯ ಇಲಾಖೆ ಬಂಧಿಸಿದೆ.

ಬಂಧಿತ ಆರೋಪಿಯನ್ನು ಕಾನಗೋಡ ಗ್ರಾಮದ ಜನತಾ ಕಾಲೋನಿಯ ದಯಾನಂದ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಮಶಿಗದ್ದೆಯ ಮಂಜುನಾಥ ಅಣ್ಣಪ್ಪ ದೇವಾಡಿಗ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಅರಣ್ಯ ಇಲಾಖೆ ಶೋಧ ಕಾರ್ಯ ಮುಂದುವರಿಸಿದೆ.

ಕಾರ್ಯಾಚರಣೆಯ ವೇಳೆ ಬಂಧಿತ ಆರೋಪಿಯಿಂದ 33.390 ಕೆ.ಜಿ. ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಎಚ್. ಸೂರ್ವವಂಶಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಮಿತ್ ಕುಮಾರ್ ಚೌವ್ಹಾಣ ಅವರ ಮಾರ್ಗದರ್ಶನದಲ್ಲಿ, ಶಿರಸಿ ವಲಯ ಅರಣ್ಯಾಧಿಕಾರಿ ಭವ್ಯ ನಾಯ್ಕ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ್ ನಾರ್ವೆಕರ್, ಅರಣ್ಯ ವನಪಾಲಕರಾದ ರೋಹಿತ್ ಎಂ. ನಾಯ್ಕ ಹಾಗೂ ಮಂಜುನಾಥ ಜಹಗೀರದಾರ ಭಾಗವಹಿಸಿದ್ದರು.ಪ್ರಕರಣ ಸಂಬಂಧ ಅರಣ್ಯ ಇಲಾಖೆ ಮುಂದಿನ ತನಿಖೆ ಕೈಗೊಂಡಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now