
ಶಿರಸಿ, ಆ.7: ಉತ್ತರ ಕನ್ನಡ ಜಿಲ್ಲಾ ವಿದ್ಯಾರ್ಥಿ ಸಂಘಟನೆಯ ಮನವಿಗೆ ಸ್ಪಂದಿಸಿದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಳಿಗ್ಗೆ 9.30 ಗಂಟೆಗೆ ಹೊಸ ಬಸ್ ವ್ಯವಸ್ಥೆ ಕಲ್ಪಿಸಿದೆ.
ಹೊಸ ಬಸ್ ಸೇವೆಗೆ ಶಿರಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ವಿದ್ಯಾರ್ಥಿ ಸಂಘಟನೆಯ ಪ್ರಮುಖ ಸಂಜಯ್ ಗಾವಂಕರ್, ವಿದ್ಯಾರ್ಥಿಗಳ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ ಬಸ್ ವ್ಯವಸ್ಥೆ ಕಲ್ಪಿಸಿದ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರಾದ ರಿತೇಶ್ ಶಾನಭೋಗ್, ಶಶಾಂಕ್ ನಾಯ್ಕ್, ಧನಂಜಯ ನಾಯ್ಕ್, ನಾಗರಾಜ ದೇಶಬಂಡಾರಿ, ದರ್ಶನ್ ಮಡಿವಾಳ, ಗೌರೀಶ ಶೆಟ್ಟಿ, ಸ್ಫೂರ್ತಿ ನಾಯ್ಕ್, ಭೂಮಿಕಾ ಹೆಗಡೆ, ಅನಿತಾ, ದೃತಿ ನಾಯ್ಕ್, ದೀಕ್ಷಾ ಹೆಗಡೆ, ಅಪೇಕ್ಷಾ ಶಾನಭಾಗ್, ವರ್ಷಾ ಸಿರ್ಸಿಕರ್, ಭಾಗ್ಯ, ಮಹಾಲಕ್ಷ್ಮಿ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now