
ಶಿರಸಿ: ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಾಜಿ ಚೌಕ್ನ ಉರ್ದು ಹಾಗೂ ಇಂಗ್ಲಿಷ್ ಶಾಲೆಯ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಬರಮಾಡಿಕೊಂಡು ‘ತೆರೆದ ಮನೆ (Open House)’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿ ಹಾಗೂ ಪೊಲೀಸ್ ಇಲಾಖೆಯ ವಿವಿಧ ಕರ್ತವ್ಯಗಳ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ ಸಂಚಾರ ನಿಯಮಗಳ ಪಾಲನೆ, ಸೈಬರ್ ಅಪರಾಧಗಳಿಂದ ಸುರಕ್ಷತೆ, ಮಕ್ಕಳ ಸುರಕ್ಷತೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಬಳಸಬಹುದಾದ ERSS-112 ತುರ್ತು ಸಹಾಯವಾಣಿ ಕುರಿತು ಸಹ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಹತ್ತಿರದಿಂದ ತಿಳಿದುಕೊಳ್ಳುವ ಅವಕಾಶ ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕಾನೂನು ಅರಿವು, ಸುರಕ್ಷತಾ ಜಾಗೃತಿ ಹಾಗೂ ಪೊಲೀಸರೊಂದಿಗೆ ಸ್ನೇಹಪೂರ್ವಕ ಸಂಬಂಧ ಬೆಳೆಸಲು ಸಹಕಾರಿಯಾಗಿವೆ.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now