
ಶಿರಸಿ: ತಾಲೂಕಿನ ಕಾಗೇರಿ ಸಮೀಪ ಶನಿವಾರ ಬಸ್ ಹಾಗೂ ಬುಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬುಲೆರೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕೆಂಚಗದ್ದೆಯಿಂದ ಶಿರಸಿ ಕಡೆಗೆ ತೆರಳುತ್ತಿದ್ದ ಬರೂರು–ಕೆಂಚಗದ್ದೆ ಬಸ್ ಹಾಗೂ ಬರೂರು ಕಡೆಗೆ ಸಾಗುತ್ತಿದ್ದ ಬುಲೆರೋ ವಾಹನ ಕಾಗೇರಿ ಸಮೀಪದ ತಿರುವಿನಲ್ಲಿ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ.
ಡಿಕ್ಕಿಯ ರಭಸಕ್ಕೆ ಬುಲೆರೋ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ಬಸ್ನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದ ಬಳಿಕ ಸ್ಥಳೀಯರು ಗಾಯಾಳುಗಳಿಗೆ ನೆರವಾಗಿದ್ದು, ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now