
ಸುಳ್ಯ: ಪುತ್ತೂರಿನ ದರ್ಬೆ ಪ್ರಕರಣದಲ್ಲಿ ಹಲ್ಲೆಗೋಳಗಾದ ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದ ಜಿಲ್ಲಾ ನಾಯಕರ ತಂಡವು ಸುಳ್ಯದ ಮಂಡೆಕೋಲಿನಲ್ಲಿರುವ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿತು.
ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿದ SDPI ಜಿಲ್ಲಾ ನಾಯಕರು , ಪಕ್ಷವು ಸಂತ್ರಸ್ತ ಕುಟುಂಬಕ್ಕೆ ಸಂಪೂರ್ಣ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಆಗಬೇಕಿರುವ ಮುಂದಿನ ಕಾನೂನು ಹಾಗೂ ಸಾಮಾಜಿಕ ಹೋರಾಟಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಈ ಭೇಟಿಯ ಸಂದರ್ಭದಲ್ಲಿ ಯಂಗ್ ಡೆಮಾಕ್ರಟ್ಸ್ ರಾಜ್ಯ ಜಾಯಿಂಟ್ ಕನ್ವೀನರ್ ಮೂನಿಷ್ ಅಲಿ ಬಂಟ್ವಾಳ, SDPI ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ, ಸುಳ್ಯ ನಗರ ಸಮಿತಿಯ ಕಾರ್ಯದರ್ಶಿ ಸುಹೇಲ್ ಹಾಗೂ ಸ್ಥಳೀಯ ಮುಖಂಡರು ಹಾಗೂ ಸಂತ್ರಸ್ತ ಕುಟುಂಬದ ಸದಸ್ಯರಾದ ಕಲಂದರ್,ಮುಬಾರೀಶ್, ಅರಿಸ್, ಮಿಸ್ಬಾ, ಸಿದ್ಧಿಕ್ ಮತ್ತು ಇತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now