
ಕಲ್ಯಾಣಪುರ ಉಡುಪಿ: ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ ಕಲ್ಯಾಣಪುರ , ವಯೋಮಿತಿ –17ರ ಹಾಗೂ 14ರ ಬಾಲಕರ ಟೇಬಲ್ ಟೆನಿಸ್ ತಂಡವು ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿಜೇತರಾಗಿ (Winners) ಹೊರಹೊಮ್ಮಿದೆ.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಅಕ್ಟೋಬರ್ 3, 4 ಮತ್ತು 5ರಂದು ಬೆಂಗಳೂರಿನ ಚನ್ನಪಟ್ಟಣದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ರಾಜ್ಯಮಟ್ಟದ ಅಂಡರ್–17 ಬಾಲಕರ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಅಲಂಕರಿಸಿತು ಹಾಗೂ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದರು,
*ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಬಾಲಕರು ವಯೋಮಿತಿ 14ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಬಾಲಕರು , ಪ್ರತಮ್, ಸಮರ್ಥ್

ವಯೋಮಿತಿ 17ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಬಾಲಕರು ಪ್ರಿಯಾನ್ ಪಿರೇರಾ , ದಿಶಾನ್ , ತನಿಷ್

ತಂಡದ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ತರಬೇತುದಾರರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಶಾಲೆಯು, ಮುಂದಿನ ದಿನಗಳಲ್ಲಿಯೂ ಅವರು ಇನ್ನಷ್ಟು ಉನ್ನತ ಸಾಧನೆ ಮಾಡಲಿ ಎಂದು ಶುಭ ಹಾರೈಸಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now