
ತೀರ್ಥಹಳ್ಳಿ: ಉತ್ತರಾಖಂಡದಲ್ಲಿ ಇತ್ತೀಚೆಗೆ (ಜೂನ್ 28)
ವರ್ಲ್ಡ್ ಫಿನ್ನೆಸ್ ಫೆಡರೇಷನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ವಾಗ್ಗೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಸಂಹಿತಾ ಉಡುಪ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾಳೆ.
ಈ ಅತ್ಯುತ್ತಮ ಪ್ರದರ್ಶನದ ಮೂಲಕ ಆಕೆ ಥೈಲ್ಯಾಂಡ್ನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಅಂತರರಾಷ್ಟ್ರೀಯ ಮಟ್ಟದ ಏಷ್ಯಾ ಪ್ರಾಕ್ಟಿಸ್ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ಶಿಪ್-2026’ ಗೆ ಅಧಿಕೃತವಾಗಿ ಆಯ್ಕೆಯಾಗಿದ್ದಾಳೆ.
ಸಂಹಿತಾ ಕುರುವಳ್ಳಿಯ ಶ್ರೀಪ್ರದ ಮತ್ತು ನಟೇಶ್ ಉಡುಪ ದಂಪತಿಯ ಪುತ್ರಿಯಾಗಿದ್ದು, ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯ ಸಾಧನೆಗೆ ವಾಗ್ಗೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ, ಶುಭಹಾರೈಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now