
ತೀರ್ಥಹಳ್ಳಿ: ಆಗುಂಬೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಣ್ಣ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೂಲತಃ ಭದ್ರಾವತಿ ತಾಲ್ಲೂಕಿನ ಆನೇವೇರಿ ಗ್ರಾಮದ ನಿವಾಸಿಯಾಗಿದ್ದ ಶಿವಣ್ಣ ಅವರು ಆಗುಂಬೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಮೊನ್ನೆ ದಿನ6 ಡ್ಯೂಟಿಯಲ್ಲಿ ಇರುವಾಗಲೇ ದಿಡೀರ್ ಕುಸಿದು ಬಿದ್ದಿದ್ದಿರು.ಕೂಡಲೇ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಮೃತರು ತೀರ್ಥಹಳ್ಳಿ, ಮಾಲೂರು ಸ್ಟೇಷನ್ ಗಳಲ್ಲಿ ಸೇವೆ ಸಲ್ಲಿಸಿದ್ದರು .
ಶಿವಣ್ಣ ಅವರ ನಿಧನಕ್ಕೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now