
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ದಿನಾಂಕ: 02/10/2025 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರ ತಡೆಯಾಗದಂತೆ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.
• ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.
• ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು.
• ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.
• ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸುವುದು.
• ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಗಂಟೆಯವರೆಗೆ ನಿರ್ಬಂಧಿಸಲಾಗಿದೆ.
ಈ ನಿಷೇಧವು ವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.
ನಮ್ಮ ವರದಿಗಾರರು

ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























